ETV Bharat / city

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ: ಇಂತಿವೆ ರಾಜ್ಯ ಪ್ರವಾಸದ ವಿವರಗಳು

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಹಾಗೂ 21 ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ಅದರ ವಿವರ ಇಂತಿದೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ
author img

By

Published : Jun 17, 2022, 2:06 PM IST

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

  1. ಜೂ.20 ರಂದು ಬೆಳಗ್ಗೆ 11.45ಕ್ಕೆ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಆಗಮಿಸುವರು. ಬಳಿಕ ಹೆಲಿಕ್ಯಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್​​ಗೆ ಬಂದು ಮಧ್ಯಾಹ್ನ 12.30 ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಹಾಗೂ ರೈಲ್ವೆ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟ್ರಿಕ್ ಪಾರ್ಕ್​ಗೆ ಪ್ರಧಾನಿ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.
    Mysore
    ಮೈಸೂರು
  2. ಮಧ್ಯಾಹ್ನ 2.30 ರಿಂದ 3.30 ರವರೆಗೆ ಬೆಂಗಳೂರಿನ ಜ್ಞಾನ ಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಹಾಗೂ ಮೇಲ್ದರ್ಜೆಗೇರಿಸಲ್ಪಟ್ಟ 150 ಐಟಿಐಗಳ ಲೋಕಾರ್ಪಣೆ ಮಾಡಿ ನಂತರ 4 ಗಂಟೆಯ ವೇಳೆಗೆ ಮೈಸೂರಿನತ್ತ ತೆರಳಲಿದ್ದಾರೆ.
  3. ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿನತ್ತ ಪ್ರಯಾಣ ಬೆಳೆಸಿ, 4.50ಕ್ಕೆ ಮೈಸೂರು ತಲುಪಲಿದ್ದಾರೆ. ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮಾಡಿ ವಿವಿಧ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದಾರೆ.
  4. ಬಳಿಕ ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ, ನಂತರ ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ.
  5. ರಾತ್ರಿ 7:30 ರ ಸುಮಾರಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ನಂತರ ಮೈಸೂರಿನ ಖಾಸಗಿ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬೆಳಗ್ಗೆ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಅರಮನೆ ಮುಂಭಾಗದ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿಯವರು, ಅನಂತರ ರಾಜ ಕುಟುಂಬದವರನ್ನ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.