ETV Bharat / city

ಅಂತಾರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಪ್ರಧಾನಿ ಮೋದಿ: ರೇಸ್ ಕೋರ್ಸ್ ಸ್ಥಳವೇ ಸೂಕ್ತ ಎಂದ ಪ್ರತಾಪ್ ಸಿಂಹ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ಕಾರ್ಯಕ್ರಮ ಮಾಡಲು ಸೂಕ್ತ ಜಾಗಕ್ಕಾಗಿ ಚರ್ಚೆಗಳು ನಡೆಯುತ್ತಿವೆ. ಸಂಸದ ಪ್ರತಾಪ್ ಸಿಂಹ ರೇಸ್​ ಕೋರ್ಸ್​ ಆವರಣವನ್ನು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

Pratap Simha
ಸಂಸದ ಪ್ರತಾಪ್ ಸಿಂಹ
author img

By

Published : May 23, 2022, 9:51 PM IST

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಕಾರ್ಯಕ್ರಮವನ್ನು ಅರಮನೆ ಮೈದಾನ ಅಥವಾ ರೇಸ್ ಕೋರ್ಸ್ ಆವರಣದಲ್ಲಿ ಆಯೋಜಿಸಲು ಚಿಂತನೆ ನಡೆಯುತ್ತಿದೆ. ಅರಮನೆ ಮೈದಾನಕ್ಕಿಂತ ರೇಸ್​ ಕೋರ್ಸ್​ ಆವರಣದಲ್ಲಿ ಹೆಚ್ಚು ಜನ ಸೇರಲು ಸ್ಥಳಾವಕಾಶ ಇರುವುದರಿಂದ ಅದುವೇ ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅರಮನೆ ಆವರಣದಲ್ಲಿ ಕೇವಲ 15000 ಜನ ರಸ್ತೆ ಸೇರಬಹುದು. ಆದರೆ ರೇಸ್ ಕೋರ್ಸ್ ನಲ್ಲಿ 1.5 ಲಕ್ಷ ಜನರು ಸೇರಬಹುದು. ಹಾಗಾಗಿ ಇವೆರೆಡರಲ್ಲಿ ರೇಸ್ಕೋರ್ಸ್ ಸ್ಥಳವೇ ಸೂಕ್ತ ಎನಿಸುತ್ತಿದೆ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮೋದಿ ಬರುವ ನೆಪದಲ್ಲಿ ಮೈಸೂರಿನ ರಸ್ತೆಗಳ ಅಭಿವೃದ್ಧಿ: ಪ್ರಧಾನಿ ಮೋದಿ ಮೈಸೂರಿಗೆ ಬರುವ ನೆಪದಲ್ಲಿ ಮೈಸೂರಿನ ರಸ್ತೆಗಳ ಅಭಿವೃದ್ಧಿಗೆ ಕೂಡ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ಉಸ್ತುವಾರಿ ಸಚಿವರು ಕ್ರಮ ವಹಿಸಿದ್ದಾರೆ. ಹೀಗಾಗಿ ಸಿಎಂ ಅವರು ವಿದೇಶ ಪ್ರವಾಸದಿಂದ ಮರಳಿದ ಬಳಿಕ ಮೈಸೂರಿಗೆ ಬಂದು ಸಭೆ ನಡೆಸಲಿದ್ದಾರೆ ಎಂದರು.

ಯೋಗ ದಿನವನ್ನು ಗಿನ್ನಿಸ್ ದಾಖಲೆಗೆ ಸೇರಿಸಬೇಕೆಂಬ ವಿಚಾರ: ಈ ಬಾರಿಯ ಯೋಗ ಪ್ರದರ್ಶನವನ್ನು ಗಿನ್ನಿಸ್ ರೆಕಾರ್ಡ್ ಮಾಡಬೇಕೆಂಬುದು ನಮ್ಮ ಮಹದಾಸೆ. ಕೆಲ ಸಮಸ್ಯೆಗಳಿದ್ದು ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಗ್ಯಾಸ್ ಪೈಪ್ಲೈನ್ ಅಳವಡಿಕೆ ವಿಚಾರ ಮೈಸೂರು ಮಹಾನಗರ ಪಾಲಿಕೆಯಿಂದ ಆಡಳಿತಾತ್ಮಕ ಒಪ್ಪಿಗೆ: ಮೈಸೂರಿನಲ್ಲಿ ಗ್ಯಾಸ್ ಪೈಪ್ಲೈನ್ ಅಳವಡಿಕೆ ಕಾಮಗಾರಿಗೆ ಮೈಸೂರು ಮಹಾನಗರ ಪಾಲಿಕೆಯು ಆಡಳಿತಾತ್ಮಕ ಒಪ್ಪಿಗೆ ನೀಡಿದೆ. ಮುಂಗಡವಾಗಿ ಪಾವತಿಸುವ ಕೆಲಸವನ್ನು ಆರಂಭಿಸಲು ಆದೇಶಿಸಿದೆ. ಇನ್ನೊಂದು ತಿಂಗಳಲ್ಲಿ ಕೆಲಸ ಆರಂಭವಾಗಲಿದ್ದು, ಮುಂದಿನ ಮಾರ್ಚ್ ಒಳಗೆ ಮೊದಲ ಹಂತದ ಗ್ಯಾಸ್​ ಪೈಪ್​ಲೈನ್​ ಅಳವಡಿಕೆ ಪೂರ್ಣಗೊಳ್ಳಲಿದೆ. ಸುಮಾರು 500 ಕಿ.ಮೀ. ವ್ಯಾಪ್ತಿಯಲ್ಲಿ ಅಳವಡಿಕೆ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು.

ಇದನ್ನೂ ಓದಿ: ನಾಡಗೀತೆ ತಿರುಚಿದ ರೋಹಿತ್ ಚಕ್ರತೀರ್ಥ ವಜಾಗೆ ಸಿದ್ದರಾಮಯ್ಯ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.