ETV Bharat / city

ವಿದ್ಯಾರ್ಥಿಗಳು ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಪಾಠ ಕಲಿಯಬೇಕು: ಪ್ರಧಾನಿ ಸಲಹೆ - PM Narendra Modi Pariksha pe charcha program

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

pm-narendra-modi-pariksha-pe-charcha-program
ವಿದ್ಯಾರ್ಥಿಗಳು ಮನಸ್ಸನ್ನು ಹಿಡಿತದಲ್ಲಿಟುಕೊಂಡಿರಬೇಕು: ಪ್ರಧಾನಿ ನರೇಂದ್ರ ಮೋದಿ
author img

By

Published : Apr 2, 2022, 11:47 AM IST

ಮೈಸೂರು: ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು‌ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮೈಸೂರಿನಿಂದ ಏಕೈಕ ವಿದ್ಯಾರ್ಥಿಯಾಗಿ ಭಾಗವಹಿಸಿದ್ದ ಜಿಲ್ಲೆಯ ದೊಡ್ಡ ಮಾರನಗೌಡನಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ಎಂ.ಬಿ. ತರುಣ್ ಅವರು ಶುಕ್ರವಾರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆನ್‌ಲೈನ್ ಪಾಠದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಿದರು. ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಸಲಹೆ ನೀಡಿದರು.

ಆಫ್‌ಲೈನ್ ಪಾಠಕ್ಕಿಂತ ಆನ್‌ಲೈನ್ ಪಾಠ ಎಷ್ಟು ಮುಖ್ಯ ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಆಫ್‌ಲೈನ್ ತರಗತಿ ಒಂದು ನಿಗದಿತ ಸ್ಥಳದಲ್ಲಿ ಮಾತ್ರ ಕಲಿಯಲು ಅವಕಾಶ. ಆದರೆ ಆನ್‌ಲೈನ್ ತರಗತಿಯಿಂದ ಯಾವಾಗ, ಎಲ್ಲಿಬೇಕಾದರೂ ಕಲಿಯಬಹುದು ಎಂದರು. ಬೃಹತ್ ಎಲ್‌ಇಡಿ ಪರದೆಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು ಮೋದಿ ಜೊತೆಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಮಕ್ಕಳ ಕಲಿಕೆ, ಪರೀಕ್ಷಾ ಫೋಬಿಯಾ ತಪ್ಪಿಸಲು ಕಾರ್ಯಕ್ರಮ ಸಹಕಾರಿ ಆಗಿತ್ತು, ಪರೀಕ್ಷೆ ಒತ್ತಡ ಕಡಿಮೆ ಮಾಡಲು ಪ್ರಧಾನಿಗಳ ಉತ್ತರ ಸಹಕಾರಿ ಆಗಿತ್ತು ಎಂದು ಹೇಳಿದರು.

ಓದಿ : 'ವಿಕ್ರಾಂತ್ ರೋಣ' ಟೀಸರ್​ ರಿಲೀಸ್​: ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.