ಮೈಸೂರು: ಮಸಾಜ್ ಪಾರ್ಲರ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಓರ್ವ ನೇಪಾಳಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ನಗರದ ಮಂಡಿ ಪ್ರದೇಶದಲ್ಲಿರುವ ರೆಡ್ ರೋಜ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಶಿವರಾಜ್ ಹಾಗೂ ಮಹದೇವ ಎಂಬುವರನ್ನು ಬಂಧಿಸಿದ್ದು, ಒಬ್ಬ ನೇಪಾಳಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಈ ದಾಳಿಯ ಸಂದರ್ಭದಲ್ಲಿ ನಗದು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.