ಮೈಸೂರು: ಕೆರೆಗೆ ಹಾರಿ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೋಹನ್ ಆತ್ಮಹತ್ಯೆಗೆ ಶರಣಾದ ಸಿಎಆರ್ ಕಾನ್ಸ್ಟೇಬಲ್.
2 ಬಾಂಬ್ ಸ್ಕ್ವಾಡ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಕೆರೆಯೊಂದರ ದಡದಲ್ಲಿ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಗಂಟುಮೂಟೆ ಸಮೇತ ರಾಜಧಾನಿಗೆ ಜನರು ವಾಪಸ್: ಅನ್ಲಾಕ್ ಆಯ್ತಾ ಬೆಂಗಳೂರು!?