ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜಿಲ್ಲೆಯ ಹುಣಸೂರಿನ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಹುಣಸೂರಿನ ಹೊರವಲಯದಲ್ಲಿರುವ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಒಡನಾಡಿ ಸೇವಾ ಸಂಸ್ಥೆಯ ತಂಡದೊಂದಿಗೆ ಹುಣಸೂರು ಪೊಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.
ಈ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಹೆಣ್ಣು ಮಕ್ಕಳನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಒಡನಾಡಿ ಸೇವಾಸಂಸ್ಥೆಗೆ ಖಚಿತ ಮಾಹಿತಿ ತಿಳಿದಿತ್ತು. ನಂತರ ಎಸ್ಪಿ ಚೇತನ್ ಅವರಿಗೆ ವಿಷಯವನ್ನು ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಡಿವೈಎಸ್ಪಿ ರವಿಕುಮಾರ್ ಅವರು ವಿಶೇಷ ತಂಡವೊಂದನ್ನು ರಚಿಸಿ, ಗುರುವಾರ ರಾತ್ರಿ ಏಕಕಾಲದಲ್ಲಿ ಮೂರು ಲಾಡ್ಜ್ಗಳ ಮೇಲೆ ದಾಳಿ ನಡೆಸಿ ದಂಧೆ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಣಸೂರಿನ ಹೊರವಲಯದಲ್ಲಿ ಇಂತಹ ದಂಧೆಗಳು ಹೆಚ್ಚಾಗಿದ್ದು, ದೆಹಲಿ, ಕೋಲ್ಕತ್ತಾ ಹಾಗೂ ಮುಂಬೈನಂತಹ ನಗರಗಳೊಂದಿಗೆ ನಂಟು ಇದೆ ಎನ್ನಲಾಗ್ತಿದೆ.
ಮೈಸೂರಿನಲ್ಲಿ ಹಲವು ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ಸಾಗಾಣಿಕೆ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಹುಣಸೂರಿನ ಪೊಲೀಸರ ತಂಡದೊಂದಿಗೆ ಒಡನಾಡಿ ಸಂಸ್ಥೆಯ ನಿರ್ದೇಶಕರು ಹಾಗೂ ಸದಸ್ಯರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ.. ವಿರೋಧಿಸಿದ್ದಕ್ಕೆ ಟ್ರೈನ್ನಿಂದ ಹೊರ ಎಸೆದ ಕಾಮುಕ!