ಮೈಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನ್ಯಾಯಾಲಯದ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನ್ಯಾಯಾಲಯದಲ್ಲಿ ಆಕಸ್ಮಿಕವಾಗಿ ಮೊದಲ ಅಂತಸ್ತಿನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಕೊಠಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮ ಆಗಿದೆ. ಬೆಂಕಿ ಅವಘಡದಿಂದ ಗಾಬರಿಗೊಂಡ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.