ETV Bharat / city

ಮೈಸೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಆರೋಪಿಗಳ ಬಂಧನ - ಮೈಸೂರಿನ ವಿಜಯನಗರದಲ್ಲಿ ಹಲವರ ಬಂಧನ

ಮೈಸೂರಿನಲ್ಲಿ ಹೋಟೆಲ್ ಒಂದರಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

prostitution-in-mysuru-hotel-accused-arrested
ಮೈಸೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಆರೋಪಿಗಳ ಬಂಧನ
author img

By

Published : Apr 5, 2022, 1:14 PM IST

ಮೈಸೂರು: ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ತಿಳಿದು ವಿಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಹಲವು ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ.

ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಪ್ರಾಪ್ತೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ಏಪ್ರಿಲ್ 4ರಂದು ಸಂಜೆ 6 ಗಂಟೆ ವೇಳೆಗೆ ದಾಳಿ ನಡೆಸಿದ್ದರು.

prostitution-in-mysuru-hotel-accused-arrested
ಹೋಟೆಲ್ ಮೇಲೆ ಪೊಲೀಸರ ದಾಳಿ

ಈ ಸಂಬಂಧ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಮಾತನಾಡಿ, ಈ ಲಾಡ್ಜ್​​​ನಲ್ಲಿ ಮೊದಲಿನಿಂದಲೂ ವೇಶ್ಯಾವಾಟಿಕೆ ದಂದೆ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ, ಏನೂ ಮಾಡಲು ಸಾಧ್ಯವಾಗಿರಲಿಲ್ಲ. ವಿಜಯನಗರ ಪೊಲೀಸ್ ಠಾಣೆಯ ಜಯಕುಮಾರ್ ಅವರ ಸಹಕಾರದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಿಂದೆಯೂ ಇಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದಾಳಿ ಮಾಡಿದ್ದರು. ಆದರೂ ಮತ್ತೆ ಅವರು ದಂಧೆ ಮುಂದುವರೆಸಿದ್ದಾರೆ. ಹಾಗಾಗಿ ಹೋಟೆಲ್ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.

ದಾಳಿ ವೇಳೆ ರಕ್ಷಿಸಿದ ಹೆಣ್ಣು ಮಕ್ಕಳಲ್ಲಿ ನಾಲ್ವರು ಬಾಂಗ್ಲಾದೇಶದವರಾಗಿದ್ದು, ಅವರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಎನ್ನಲಾಗಿದೆ. ತನಿಖೆಯಿಂದ ಇನ್ನೂ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ ಎಂದು ಪೋಲಿಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಯುವತಿ ವಿಚಾರಕ್ಕೆ ಸ್ನೇಹಿತನ ಕೊಲೆ, ನಾಲ್ವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.