ಮೈಸೂರು: ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರದ ಮುಂದಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಟೌನ್ಹಾಲ್ ಮುಂದೆ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ಹಾಲ್ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರ ಟಿಪ್ಪು ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆದುಹಾಕುವ ನಿರ್ಧಾರ ಮಾಡಿದೆ. ಇದನ್ನು ಕೂಡಲೇ ಕೈಬಿಡಬೇಕು. ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ , ಟಿಪ್ಪು ಸುಲ್ತಾನ್ ಸಂವಿಧಾನದ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಪಠ್ಯವನ್ನು ಪಠ್ಯಕ್ರಮದಿಂದ ಕೈಬಿಡಲು ಮುಂದಾಗಿರುವುದು ರ್ದುದೈವದ ಸಂಗತಿ ಎಂದರು.
ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಪ್ರಗತಿಪರ ಸಂಘಟನೆಗಳು ಒಕ್ಕೂಟ ಎಚ್ಚರಿಕೆ ನೀಡಿದೆ.