ETV Bharat / city

ಉದ್ದೇಶಿತ ಫಿಲ್ಮ್‌ಸಿಟಿಗೆ ಪುನೀತ್ ರಾಜ್‌ಕುಮಾರ್‌ ಹೆಸರಿಡಲು ಚಿಂತನೆ: ಸಚಿವ ಎಸ್.ಟಿ.ಸೋಮಶೇಖರ್

author img

By

Published : Nov 10, 2021, 8:49 PM IST

ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರಿಗೆ ಮೈಸೂರಿನಲ್ಲಿ ದೊಡ್ಡ ವೇದಿಕೆಯಲ್ಲಿ 'ನುಡಿನಮನ' ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ನಡೆಸಿದ ಪೂರ್ವಭಾವಿ ಸಭೆ ನಡೆಸಲಾಯಿತು. ಈ ವೇಳೆ ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ (Mysuru Film City) ಪುನೀತ್ ರಾಜ್‌ಕುಮಾರ್ ಹೆಸರಿಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ (Minister S.T.Somashekhar) ತಿಳಿಸಿದರು.

ಸಚಿವ ಎಸ್.ಟಿ.ಸೋಮಶೇಖರ್
ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ (Mysuru Film City) ಕರ್ನಾಟಕದ ಯುವರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಹೆಸರಿಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಇತ್ತೀಚೆಗೆ ನಮ್ಮನಗಲಿದ ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರಿನಲ್ಲಿ ದೊಡ್ಡ ವೇದಿಕೆಯಲ್ಲಿ 'ನುಡಿನಮನ' ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು.

ಪೂರ್ವಭಾವಿ ಸಭೆ
ಪೂರ್ವಭಾವಿ ಸಭೆ

ನುಡಿನಮನ ಕಾರ್ಯಕ್ರಮ ಆಯೋಜಿಸಲು ಉಪಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳು ಚರ್ಚಿಸಿ ನೀಡುವ ಸಲಹೆಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ಮೈಸೂರು ವಿಶ್ವವಿದ್ಯಾಲಯದ (Mysuru University) ಮಾನಸಗಂಗೋತ್ರಿಯಲ್ಲಿರುವ ಬಯಲುರಂಗ ಮಂದಿರದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದರು.

ಆ ಕಾರ್ಯಕ್ರಮದಲ್ಲಿಪುನೀತ್ ರಾಜ್‌ಕುಮಾರ್ (Puneeth Rajkumar) ಕುರಿತು ಪುಸ್ತಕ ಬಿಡುಗಡೆ ಮಾಡಲಾಗುವುದು. ಈ ಪುಸ್ತಕಕ್ಕೆ ಸಾರ್ವಜನಿಕರಿಂದ ಲೇಖನ ಆಹ್ವಾನಿಸಲಾಗುವುದು. ಅಭಿಮಾನಿಗಳು ಲೇಖನ ಕಳುಹಿಸಿಕೊಡಬಹುದು ಎಂದು ಹೇಳಿದರು.

ಪೂರ್ವಭಾವಿ ಸಭೆ
ಪೂರ್ವಭಾವಿ ಸಭೆ

ನುಡಿನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (CM Basavaraj Bommai) ಅವರನ್ನು ಸಹ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.