ETV Bharat / city

ಬಿಜೆಪಿ ಸರ್ಕಾರದಲ್ಲಿ ವೈಫಲ್ಯಗಳ ಸರಮಾಲೆಯೇ ಇದೆ: ಆರ್‌.ಧ್ರುವನಾರಾಯಣ್​

author img

By

Published : Mar 27, 2022, 12:42 PM IST

ನಂಜನಗೂಡಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

R Dhruvanarayan outrage on bjp government
ಬಿಜೆಪಿ ವಿರುದ್ಧ ಧ್ರುವನಾರಾಯಣ್​​ ವಾಗ್ದಾಳಿ

ಮೈಸೂರು: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಒಂದೇ ಒಂದು ಮನೆ ಕೊಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ವೈಫಲ್ಯಗಳ ಸರಮಾಲೆಯೇ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಟೀಕಿಸಿದರು. ಇಂದು ಜಿಲ್ಲೆಯ ನಂಜನಗೂಡಿನ ಮಹದೇವನಗರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಜಿ.ಪಂ ವ್ಯಾಪ್ತಿಯ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ಹಣ ಪಡೆಯುತ್ತಾರೆ ಎಂದು ಗುತ್ತಿಗೆದಾರರ ಸಂಘದವರು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನಂಜನಗೂಡು ಕ್ಷೇತ್ರದಿಂದ ಹಿಡಿದು ರಾಜ್ಯದವರೆಗೂ ಭ್ರಷ್ಟಾಚಾರದಲ್ಲಿ ಈ ಸರ್ಕಾರ ತೊಡಗಿದೆ. ನಂಜನಗೂಡು ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಾಂಗ್ರೆಸ್ ಸರ್ಕಾರದ ಕಾಮಗಾರಿಗಳೇ ಇಂದೂ ಕೂಡ ನಡೆಯುತ್ತಿವೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ನೀಡಿದ್ದ ಹೆಚ್ಚಿನ ಅನುದಾನದಲ್ಲಿ ಇಂದು ಕೂಡ ಗ್ರಾಮಗಳಲ್ಲಿ ಸಿಸಿ ರಸ್ತೆಗಳು, ಚರಂಡಿ, ಸಮುದಾಯ ಭವನಗಳ ಕಾಮಗಾರಿಗಳು ನಡೆಯುತ್ತಿವೆ ಎಂದರು.

ಇದನ್ನೂ ಓದಿ: ಏಪ್ರಿಲ್​​​​ನಲ್ಲಿ ಮೋದಿ, ಅಮಿತ್ ಶಾ, ನಡ್ಡಾ ರಾಜ್ಯ ಪ್ರವಾಸ: ಬಿಜೆಪಿಯಲ್ಲಿ ಗರಿಗೆದರಿದ ಚಟುವಟಿಕೆ

ನಂಜನಗೂಡಿನಿಂದ ಚಾಮರಾಜನಗರದವರೆಗೆ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮಾಡಿ, ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲ ಮಾಡಿಕೊಡಲಾಗಿದೆ. ಅಲ್ಲದೇ ಚಿನ್ನದಗುಡಿಹುಂಡಿ, ನಂಜನಗೂಡು ಸೇರಿದಂತೆ 3 ಕಡೆಗಳಲ್ಲಿ ಓವರ್ ಬ್ರಿಡ್ಜ್ ಮಾಡಲು ಸರ್ಕಾರದಿಂದ ಮಂಜೂರಾತಿ ಮಾಡಿಸಿದ್ದೆವು ಎಂದು ಹೇಳಿದರು. ಇಡೀ ದೇಶದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರ ನೇತೃತ್ವದಲ್ಲಿ ಅತ್ಯುತ್ತಮ ಆಡಳಿತವನ್ನು ಕಾಂಗ್ರೆಸ್ ನೀಡಿದೆ. ಆದರೆ ಮೋದಿ ಸರ್ಕಾರ ಜನಸಾಮಾನ್ಯರಿಗೆ ಉತ್ತಮ ಆಡಳಿತವನ್ನು ನೀಡುವಲ್ಲಿ ವಿಫಲವಾಗಿರುವುದರ ಜೊತೆಗೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದು ಟೀಕಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.