ಮೈಸೂರು: ರಾಜ್ಯ ಸರ್ಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಆ.14 ರ ಮಧ್ಯರಾತ್ರಿ ಬೆಂಗಳೂರಲ್ಲಿ ತಮಟೆ ಮತ್ತು ಪಂಜಿನ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಕಾಗೋಷ್ಠಿಯಲ್ಲಿ ತಿಳಿಸಿದರು.
ಇಂದು ನಗರದ ಜಲದರ್ಶಿನಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಜಂಟಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದ, ರಾಜ್ಯ ಸರ್ಕಾರ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ದೊಡ್ಡ ಮಟ್ಟದ ಹೋರಾಟಗಳನ್ನು ರೈತ ಸಂಘ ನಡೆಸಲಿದೆ. ಈಗಾಗಲೇ ಆ.8 ರಂದು ನನ್ನ ಭೂಮಿ ನಮ್ಮ ಹಕ್ಕು , ನಮ್ಮ ಭೂಮಿ ಮಾರಾಟಕ್ಕಿಲ್ಲ ಎಂಬ ನಾಮಫಲಕಗಳನ್ನು ಗ್ರಾಮಗಳಲ್ಲಿ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಮುಂದುವರೆದ ಭಾಗವಾಗಿ ದೇಶಕ್ಕೆ ಸ್ವತಂತ್ರ ಸಿಕ್ಕ ಆ14 ರ ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಲ್ಲಿ ತಮಟೆ ಚಳವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದರು.
ನಂತರ ಆ.29 ರಂದು ತಾಲೂಕು ಕೇಂದ್ರಗಳಲ್ಲಿ ಜನಸಂಪರ್ಕ ಸಭೆ ನಡೆಸಿ, ಜನ ಜಾಗೃತಿ ತೀವ್ರಗೊಳಿಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿವಿಧ ದಲಿತ ಸಂಘದ ಮುಖಂಡರು ಮಾತನಾಡಿ, ಆ.14ರ ಚಳವಳಿಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.