ETV Bharat / city

ಕಾಂಗ್ರೆಸ್​ ವಿಭಾಗೀಯ ಮಟ್ಟದ ಸಭೆ: ಮೈಸೂರಿಗೆ ಆಗಮಿಸಿದ ಸುರ್ಜೇವಾಲ, ಡಿ.ಕೆ ಶಿವಕುಮಾರ್ - Congress section level meeting in Mysore

ಇಂದು ಮೈಸೂರಿನಲ್ಲಿ ಕಾಂಗ್ರೆಸ್​ ವಿಭಾಗೀಯ ಮಟ್ಟದ ಸಭೆ ಖಾಸಗಿ ಹೋಟೆಲ್​ನಲ್ಲಿ ನಡೆಯಲಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಸೂರಿಗೆ ಬಂದಿಳಿದಿದ್ದಾರೆ.

Randeep Singh Surjewala and DK Shivakumar
ಮೈಸೂರಿಗೆ ಬಂದಿಳಿದ ಸುರ್ಜೇವಾಲ, ಡಿ.ಕೆ ಶಿವಕುಮಾರ್
author img

By

Published : Jul 31, 2021, 10:47 AM IST

ಮೈಸೂರು: ಹುಬ್ಬಳ್ಳಿಯಿಂದ ರೈಲಿನಲ್ಲಿ‌ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮೈಸೂರಿನಲ್ಲಿ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ಇಂದು ಮೈಸೂರಿನಲ್ಲಿ ಕಾಂಗ್ರೆಸ್​ ವಿಭಾಗೀಯ ಮಟ್ಟದ ಸಭೆ ಖಾಸಗಿ ಹೋಟೆಲ್​ನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕಾಗಿ ಹುಬ್ಬಳ್ಳಿಯಿಂದ ರಂದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ. ಈ ವೇಳೆ ಅವರನ್ನು ಮೈಸೂರು ರೈಲ್ವೆ ನಿಲ್ದಾಣದಿಂದ ಕಾಂಗ್ರೆಸ್ ಭವನದವರೆಗೆ ಸಾರೋಟ್ ಮೆರವಣಿಗೆ ಮೂಲಕ ಪೂರ್ಣಕುಂಭ ಸ್ವಾಗತ ನೀಡಿ, ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಮೈಸೂರಿಗೆ ಬಂದಿಳಿದ ಸುರ್ಜೇವಾಲ, ಡಿ.ಕೆ ಶಿವಕುಮಾರ್

ಹಳೇ ಮೈಸೂರು ಪ್ರಾಂತ್ಯದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಸೇರಿದಂತೆ ಈ ಭಾಗದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ನಾಯಕರ ಸಭೆಯನ್ನು ‌ಖಾಸಗಿ ಹೋಟೆಲ್​ನಲ್ಲಿ‌ ಕರೆಯಲಾಗಿದ್ದು, ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು ಸೇರಿದಂತೆ ಸ್ಥಳೀಯ ಶಾಸಕರು, ನಾಲ್ಕು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.