ಮೈಸೂರು: ಪ್ರವಾಸಿ ತಾಣಗಳಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಕೊರೊನಾ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧವನ್ನು ಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ತಾಲೂಕಿನ ಪ್ರೇಕ್ಷಣೀಯ ಸ್ಥಳಗಳು ಮತ್ತು ಆ ಪ್ರದೇಶದ ವ್ಯಾಪ್ತಿಯಲ್ಲಿರುವ ಹೋಟೆಲ್, ರೆಸಾರ್ಟ್, ಹೋಂ ಸ್ಪೇಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಅಲ್ಲದೆ ಅಲ್ಲಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಈದೀಗ ಈ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿದ್ದು, ಎಲ್ಲಾ ಹೋಟೆಲ್, ರೆಸಾರ್ಟ್ಗಳನ್ನು ತೆರವುಗೊಳಿಸಲಾಗಿದೆ. ಹೊಸ ಆದೇಶದಿಂದಾಗಿ ಶನಿವಾರದಿಂದ ಪ್ರವಾಸಿ ಕೇಂದ್ರಗಳು ಪ್ರವಾಸಿಗರ ಭೇಟಿಗೆ ಮುಕ್ತಗೊಂಡಿದ್ದು, ಬಂಡೀಪುರ, ಕೆ.ಗುಡಿ ಸಫಾರಿ ಹಾಗೂ ದಮ್ಮನಕಟ್ಟೆ ಅರಣ್ಯದ ಎಲ್ಲಾ ಪ್ರವಾಸಿ ತಾಣಗಳು ತೆರೆಯಲ್ಪಟ್ಟಿವೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.