ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಮೈಸೂರು-ನಂಜನಗೂಡು ರಸ್ತೆ ತಡೆ ನಡೆಸಿದರು.
ಮೈಸೂರು-ನಂಜನಗೂಡು ಎಪಿಎಂಸಿ ಕಚೇರಿಯ ಮುಂಭಾಗವಿರುವ ವೃತ್ತದ ಬಳಿ ಜಮಾಯಿಸಿದ ನೂರಾರು ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗುವುದಕ್ಕಿಂತ ಅನಾನುಕೂಲವಾಗಲಿದೆ.
ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವ ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.