ಮೈಸೂರು: ಕುರುಬರನ್ನು ಎಸ್ಟಿಗೆ ಸೇರಿಸುವ ಬಗ್ಗೆ ಹೋರಾಟ ಅಗತ್ಯ ಇಲ್ಲ. ಈ ಹೋರಾಟದ ಹಿಂದೆ ಆರ್ಎಸ್ಎಸ್ನ ಕುತಂತ್ರ ಅಡಗಿದೆ ಎಂದು ಮಾಜಿ ಸಿಎಂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.
ನಗರದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ನನ್ನ ಪ್ರಕಾರ ಕುರುಬರನ್ನು ಎಸ್ಟಿಗೆ ಸೇರಿಸುವ ಕುರಿತು ಹೋರಾಟದ ಅವಶ್ಯಕತೆ ಈಗ ಇಲ್ಲ. ಈ ಹೋರಾಟವನ್ನು ಆರ್ಎಸ್ಎಸ್ ಕುರುಬ ಸಮಾಜವನ್ನು ವಿಭಜಿಸಲು ಹಾಗೂ ನನ್ನನ್ನು ವೀಕ್ ಮಾಡಲು ಬಳಸಿಕೊಳ್ಳುತ್ತಿದೆ. ಇದಕ್ಕೆ ಈಶ್ವರಪ್ಪ ಕೈ ಗೊಂಬೆ ಆಗಿದ್ದಾರೆ ಎಂದು ಆರೋಪಿಸಿದರು.
ಇದನ್ನು ಓದಿ- ಕುರುಬ ಸಮುದಾಯ ಎಸ್ಟಿಗೆ ಸೇರಿಸುವಂತೆ ಫೆ.27 ರಂದು ಬೃಹತ್ ಪಾದಯಾತ್ರೆ!
ನಾಯಕತ್ವ ಯಾರು ವಹಿಸುತ್ತಾರೆ ಎಂಬುದು ಮುಖ್ಯ ಅಲ್ಲ. ಈ ವಿಚಾರದಲ್ಲಿ ಹೋರಾಟವೇ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಇದನ್ನು ಸರ್ಕಾರದ ಮಟ್ಟದಲ್ಲಿ ಜಾರಿಗೆ ತರಬಹುದು ಎಂದರು.