ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಸ್.ವಿದ್ಯಾಶಂಕರ್ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ವಿಚಾರಣೆ ನಡೆಸಿ ಎಲ್ಲಾ ವಿಷಯದ ಬಗ್ಗೆ ಮಾಹಿತಿ ಒದಗಿಸುವಂತೆ ಯುಜಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಎಸ್.ವಿದ್ಯಾಶಂಕರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆರೋಪದ ಬಗ್ಗೆ ಪೂರ್ಣ ವಿಚಾರಣೆ ನಡೆಸಿ, ಎಲ್ಲಾ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಯುಜಿಸಿ (ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ) ಪತ್ರ ಬರೆದಿದೆ.
ಮುಕ್ತ ವಿವಿಯ ಕುಲಪತಿಗಳಾದ ಪ್ರೊ.ಎಸ್. ವಿದ್ಯಾಶಂಕರ್ ಅವಶ್ಯಕತೆ ಇಲ್ಲದೆ ಇದ್ದರೂ ಹೆಚ್ಚು ನೇಮಕಾತಿಗಳನ್ನು ಮಾಡಿಕೊಂಡಿದ್ದಾರೆ. ಹೆಚ್ಚು ಪ್ರಾದೇಶಿಕ ಕೇಂದ್ರಗಳನ್ನು(ರೀಜನಲ್ ಸೆಂಟರ್) ಸ್ಥಾಪನೆ ಮಾಡಿಕೊಂಡಿದ್ದಾರೆ. ದೂರ ಶಿಕ್ಷಣವನ್ನು ಕರೆಸ್ಪಾಂಡೆಂಟ್ ಶಿಕ್ಷಣವನ್ನಾಗಿ ಮಾರ್ಪಡಿಸಲಾಗಿದೆ. ಯುಜಿಸಿ ನಿಯಮಗಳಿಗೆ ವಿರುದ್ಧವಾಗಿ ಆಡಳಿತ ಹಾಗೂ ಕೋರ್ಸ್ಗಳು ನಡೆಯುತ್ತಿವೆ ಎಂದು ಆರೋಪಿಸಿ ವಿಶ್ರಾಂತ ಕುಲಪತಿ ಪ್ರೊ.ಎನ್.ಎಸ್.ರಾಮೇಗೌಡ ಅವರು ಯುಜಿಸಿಗೆ ಪತ್ರ ಬರೆದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಅವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಯುಜಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಪ್ರೊ.ಎಸ್.ವಿದ್ಯಾಶಂಕರ್ ವಿರುದ್ಧ ವಿಚಾರಣೆ ನಡೆಸಿ, ಮಾಹಿತಿ ನೀಡುವಂತೆ ಪತ್ರ ಬರೆದಿದೆ.
ಇದನ್ನೂ ಓದಿ:ಚಾಮರಾಜನಗರದಲ್ಲಿ ಒಂದು ತಿಂಗಳು ಎಲ್ಲ ರೀತಿಯ ಗಣಿಗಾರಿಕೆ ಬಂದ್: ಸಚಿವ ವಿ.ಸೋಮಣ್ಣ
ಈ ಪತ್ರವನ್ನು ರಾಮೇಗೌಡ ಅವರಿಗೆ ಕಳಿಸಿದ್ದು, ರಾಮೇಗೌಡ ಅವರು ನನ್ನ ಪತ್ರಕ್ಕೆ ಯುಜಿಸಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸರ್ಕಾರಕ್ಕೆ ಪತ್ರ ಬರೆದು ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಸರ್ಕಾರ ವಿಚಾರಣೆ ವೇಳೆ ಮಾಹಿತಿಗಳನ್ನು ಕೇಳಿದರೆ ಸಮಗ್ರ ದಾಖಲೆಗಳೊಂದಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.