ETV Bharat / city

ಚಿತ್ರನಗರಿ ತರಾತುರಿಯಲ್ಲಿ ನಿರ್ಮಾಣ ಮಾಡದೇ ತಜ್ಞರ ಅಭಿಪ್ರಾಯ ಪಡೆಯಿರಿ: ಅಬ್ದುಲ್ ಮಜೀದ್ - ರಾಜ್ಯದಲ್ಲಿ ಚಿತ್ರನಗರಿ

ಚಿತ್ರನಗರಿಯನ್ನು ತರಾತುರಿಯಲ್ಲಿ ನಿರ್ಮಾಣ ಮಾಡದೇ ತಜ್ಞರ ಜೊತೆ ಚರ್ಚೆ ನಡೆಸಿ ನಂತರ ನಿರ್ಮಾಣಕ್ಕೆ ಮುಂದಾಗಲಿ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ.

SDPI state President abdul majeed
ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
author img

By

Published : Apr 27, 2022, 8:19 PM IST

ಮೈಸೂರು: ನಗರದಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಆದರೆ ಚಿತ್ರನಗರಿಯನ್ನು ತರಾತುರಿಯಲ್ಲಿ ನಿರ್ಮಾಣ ಮಾಡದೇ ಚಿತ್ರರಂಗದವರು, ಸಾಹಿತಿಗಳು, ತಜ್ಞರ ಜೊತೆ ಚರ್ಚೆ ನಡೆಸಿ ನಂತರ ನಿರ್ಮಾಣಕ್ಕೆ ಮುಂದಾಗಲಿ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಮೈಸೂರು-ಬೆಂಗಳೂರು ನಡುವೆ ದಶಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿರುವುದರಿಂದ 1 ಗಂಟೆ 30 ನಿಮಿಷದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಬಹುದಾಗಿದೆ. ಸಿನಿಮಾ ಚಿತ್ರೀಕರಣಕ್ಕೆ ಅಗತ್ಯವಾದ ವಸ್ತುಗಳನ್ನು ಮೈಸೂರಿಗೆ ತರುವುದು ಸುಲಭವಾಗುತ್ತದೆ. ಇದೀಗ ಚಿತ್ರನಗರಿ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ, ಇದು ಸಂತಸದ ವಿಚಾರ ಎಂದರು.

ಇದನ್ನೂ ಓದಿ: ಬಿಎಂಟಿಸಿಗೆ ಹೊರೆಯಾಗುತ್ತಿರುವ ವೋಲ್ವೋ ಬಸ್‌ಗಳು: ನಿರ್ವಹಣೆಗೂ ಸಾಕಾಗದ ಸಂಪಾದನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.