ETV Bharat / city

ಮೈಸೂರಲ್ಲಿ ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ - metagalli police station Sexual assault on a girl

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಮುಕನೊಬ್ಬ 12 ವರ್ಷದ ಬಾಲಕಿಗೆ ತಿಂಡಿ ಆಸೆ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

sexual-assault-on-a-girl-in-mysore
ಲೈಂಗಿಕ ದೌರ್ಜನ್ಯ
author img

By

Published : Oct 5, 2021, 5:28 PM IST

ಮೈಸೂರು: ತಿಂಡಿ ಆಸೆ ತೋರಿಸಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಖಾಸಗಿ ಕಂಪನಿಯೊಂದರ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದ ರಂಗಸ್ವಾಮಿ ಬಂಧಿತ ಆರೋಪಿ. ಪತ್ನಿ ಮನೆಯಲ್ಲಿ ಇರದ ಸಮಯ ನೋಡಿ ರಂಗಸ್ವಾಮಿ ಎದುರು ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿಯನ್ನು ತಿಂಡಿ ಕೊಡುತ್ತೇನೆ ಬಾ ಎಂದು ಕರೆದಿದ್ದಾನೆ. ಇದನ್ನ ನಂಬಿ ಬಂದ ಬಾಲಕಿಯ ಜೊತೆ ಆರೋಪಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗ್ತಿದೆ.

ರಂಗಸ್ವಾಮಿಯ ವರ್ತನೆ ನೋಡಿ ಭಯಭೀತಳಾದ ಬಾಲಕಿ ಅಳುತ್ತಾ ಓಡಿ ಹೋಗಿದ್ದಾಳೆ. ಇದನ್ನು ಕಂಡ ಬಾಲಕಿಯ ಪೋಷಕರು ಗಾಬರಿಗೊಂಡು ವಿಚಾರಿಸಿದಾಗ ಕೃತ್ಯ ಬಯಲಿಗೆ ಬಂದಿದೆ.

ಕೂಡಲೇ ಪೋಷಕರು ಮೇಟಗಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಇನ್ಸಪೆಕ್ಟರ್ ಮಲ್ಲೇಶ್ ಮತ್ತು ಸಿಬ್ಬಂದಿ ರಂಗಸ್ವಾಮಿಯನ್ನು ಬಂಧಿಸಿದ್ದಾರೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.