ETV Bharat / city

ಸಿದ್ದರಾಮಯ್ಯರ ಗೋಮುಖವ್ಯಾಘ್ರತನವನ್ನು ರಾಜ್ಯದ ಜನತೆ ನೋಡಿದ್ದಾರೆ: ಶೋಭಾ ಕರಂದ್ಲಾಜೆ

author img

By

Published : May 19, 2022, 1:49 PM IST

ಮೈಸೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

central Minister Shobha Karandlaje
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ಸಿದ್ದರಾಮಯ್ಯ ಅವರ ಗೋಮುಖ ವ್ಯಾಘ್ರತನ, ಇಬ್ಭಗೆ ನೀತಿ ಬಗ್ಗೆ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಅವರ ಅಧಿಕಾರಾವಧಿಯಲ್ಲಿ ಏನನ್ನೂ ಮಾಡಲಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈಗ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುವುದಾಗಿ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ರಾಜ್ಯದ ಜನತೆಗೆ ಮತ್ತೆ ಸುಳ್ಳು ಹೇಳುತ್ತಿದ್ದಾರೆಂಬುದು ಗೊತ್ತಾಗುತ್ತದೆ. ಸಿದ್ದರಾಮಯ್ಯನವರು ಐದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಲಿಂಗಾಯುತರನ್ನು, ಹಿಂದುಳಿದ ಜಾತಿಯವರನ್ನು ಒಡೆದಿರುವುದು ಅವರ ಅಭಿವೃದ್ಧಿ ಕಾರ್ಯವಾಗಿದ್ದು, ಮುಂದೆ ಏನನ್ನೋ ಮಾಡುತ್ತೇನೆ ಎಂದು ಹೇಳುತ್ತಿರುವುದು ಕೇವಲ ಸುಳ್ಳು ಭರವಸೆ ಎಂದು ಟೀಕಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಅವರಿಗೆ ಸಿಎಂ ಸ್ಥಾನ ಸಿಗುವುದು ಒಂದು ರೀತಿಯಲ್ಲಿ ಮನೆ ಮುಂದೆ ನಾಳೆ ಬಾ ಎಂಬ ಬೋರ್ಡ್ ಹಾಕಿದಂತೆ. ಸಿದ್ದರಾಮಯ್ಯ ಅವರ ಎಲ್ಲಾ ಹೇಳಿಕೆಗಳು ಚುನಾವಣೆ ಗಿಮಿಕ್ಸ್ ಆಗಿವೆ ಎಂದು ಟೀಕಿಸಿದರು.

ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಮರಳುತ್ತಾರೆ ಎಂಬ ವಿಷಯಕ್ಕೂ ನನಗೂ ಸಂಬಂಧವಿಲ್ಲ. ಈ ಬಗ್ಗೆ ನನಗೆ ಏನೂ ಮಾಹಿತಿ ಇಲ್ಲ. ಕೇಂದ್ರ ಸಚಿವ ಸ್ಥಾನದ ದೊಡ್ಡ ಅವಕಾಶವನ್ನು ಪಕ್ಷ ನೀಡಿದೆ. ನಾನು ಹಿಂದೆ ನೋಡಿರದ ರಾಜ್ಯವನ್ನು ಸಚಿವೆ ಆಗಿ ನೋಡಿದ್ದೇನೆ. ಅದರಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ವದಂತಿಗಳಿಗೂ ನನಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಂಕಟದಲ್ಲಿ ಸಂಜೀವಿನಿಯಾದ ಸೋಶಿಯಲ್​ ಮೀಡಿಯಾ​: ಶಿಶುವಿಗೆ ಎದೆಹಾಲು ಕೊರತೆ ನೀಗಿಸಿದ ಅಮ್ಮಂದಿರು!

ದೇಶದಲ್ಲಿ ಸದ್ಯಕ್ಕೆ ರಸಗೊಬ್ಬರದ ಯಾವುದೇ ಸಮಸ್ಯೆ ಇಲ್ಲ. ಕೆಲವೆಡೆ ಮಾತ್ರ ರಸ ಗೊಬ್ಬರದ ಕೊರತೆ ಬಗ್ಗೆ ಮಾಹಿತಿ ಇದೆ. ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮ ರಸಗೊಬ್ಬರ ಪೂರೈಕೆಯಲ್ಲಿ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲೇ ರಸಗೊಬ್ಬರ ಉತ್ಪಾದನೆಗೆ ಕ್ರಮ ಕೈಗೊಳ್ಳುತ್ತೇವೆ. ಮುಂಗಾರು ಆರಂಭ ಹಿನ್ನೆಲೆ ರಸಗೊಬ್ಬರ, ಬಿತ್ತನೆ ಬೀಜಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.