ETV Bharat / city

ಹಿಜಾಬ್‌ ಹೇಳಿಕೆ ವಿವಾದ: ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ - opposition leader siddaramaiah latest news

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.

siddaramaiah maintains distance from media persons
ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ
author img

By

Published : Mar 27, 2022, 12:38 PM IST

ಮೈಸೂರು: ಹಿಜಾಬ್ ಕುರಿತ ಹೇಳಿಕೆ ವಿವಾದ ಸೃಷ್ಟಿಸಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮಗಳಿಂದ ದೂರ ಉಳಿದರು. ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಲು ತೆರಳಿದಾಗ ಅವರತ್ತ ತಿರುಗಿಯೂ ನೋಡದೆ ಸ್ಥಳೀಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕಾರು ಹತ್ತಿ ಹೊರಟು ಹೋದರು. ಕಳೆದ 3 ದಿನಗಳಿಂದ ತವರಿನಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ, ಇಂದು ಸಂಜೆ ಸ್ಥಳೀಯ ಕಾರ್ಯಕ್ರಮಗಳನ್ನು ಮುಗಿಸಿ ರಾಜಧಾನಿಗೆ ವಾಪಸ್ ಆಗಲಿದ್ದಾರೆ.

ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ

ಏನಿದು ವಿವಾದ?: ಸಿದ್ದರಾಮನಹುಂಡಿ ಸಿದ್ದರಾಮೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಗ್ರಾಮದ ಮನೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುವಾಗ, ಸ್ವಾಮೀಜಿಗಳು ತಲೆಯ ಮೇಲೆ ಕಾವಿ ಬಟ್ಟೆ ಹಾಕುತ್ತಾರೆ. ಅದನ್ನು ನೀವು (ಮಾಧ್ಯಮಗಳು)ಪ್ರಶ್ನೆ ಮಾಡುತ್ತೀರಾ?. ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲ್ವಾ?‌. ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪಟ್ಟಾ ತಲೆ ಮೇಲೆ ಹಾಕಿ‌ಕೊಳ್ಳುತ್ತೇವೆ ಎಂದರೆ ಅದರಲ್ಲೇನು ತಪ್ಪಿದೆ? ಎಂದು ಹೇಳಿದ್ದರು. ಈ ಹೇಳಿಕೆಗೆ ಮಠಾಧೀಶರು ಹಾಗೂ ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿ, ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯರ ವಿವಾದಾತ್ಮಕ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ನಾಯಕರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.