ETV Bharat / city

ಇದು 'ಸಬ್ ಕಾ ವಿನಾಶ್ ಬಜೆಟ್' - ಸಿದ್ದರಾಮಯ್ಯ - ಸಬ್ ಕಾ ವಿನಾಶ್ ಬಜೆಟ್ ಎಂದ ಸಿದ್ದರಾಮಯ್ಯ

Opposition leader Siddaramaiah reaction on Union Budget-2022: ಇಂದು ಮಂಡನೆಯಾದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಆದ್ದರಿಂದ ನಿರಾಶೆಯಾಗಿಲ್ಲ.‌ ಆದರೆ ಮಹಿಳೆಯರು, ರೈತರು ಹಾಗೂ ಮಧ್ಯಮ ವರ್ಗದವರು ನಿರೀಕ್ಷೆ ಇಟ್ಟುಕೊಂಡಿದ್ದರು. ಅವರ ನಿರೀಕ್ಷೆ ಹುಸಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರದ ಬಜೆಟ್​ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Feb 1, 2022, 6:03 PM IST

ಮೈಸೂರು: ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ಯಾವುದಕ್ಕೂ ಆದ್ಯತೆ ನೀಡಿಲ್ಲ. ಸಮಸ್ಯೆಗಳಿಗೆ ಪರಿಹಾರ ನೀಡಿಲ್ಲ. ಇದೊಂದು ಸಬ್ ಕಾ ವಿನಾಶ್ ಬಜೆಟ್ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಹೆಚ್ ಡಿ ಕೋಟೆ ಜಂಗಲ್ ಲಾಡ್ಜ್ ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಮಂಡನೆಯಾದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಆದ್ದರಿಂದ ನಿರಾಶೆಯಾಗಿಲ್ಲ.‌ ಆದರೆ ಮಹಿಳೆಯರು, ರೈತರು ಹಾಗೂ ಮಧ್ಯಮ ವರ್ಗದವರು ನಿರೀಕ್ಷೆ ಇಟ್ಟುಕೊಂಡಿದ್ದರು. ಅವರ ನಿರೀಕ್ಷೆ ಹುಸಿಯಾಗಿದೆ ಎಂದರು.

ಈ ವರ್ಷ 39.45 ಲಕ್ಷ ಕೋಟಿ ಬಜೆಟ್ ಮಂಡಿಸಲಾಗಿದೆ. ಇದರಲ್ಲಿ ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರಗಳಲ್ಲಿ ಉತ್ತೇಜನಕಾರಿ ಕಾರ್ಯಕ್ರಮಗಳನ್ನ ಘೋಷಣೆಯಾಗಿಲ್ಲ. ಮೋದಿಯವರು 8 ವರ್ಷದ ಅವಧಿಯಲ್ಲಿ 93 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಅದಕ್ಕೆ 9.40 ಲಕ್ಷ ಕೋಟಿ ರೂ. ಬಡ್ಡಿ ಕಟ್ಟಬೇಕು. ದೇಶವನ್ನ ಸಾಲದ ಸುಳಿಯಲ್ಲಿ ಸಿಲುಕಿಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ: ಅತ್ಯಂತ ನಿರಾಶದಾಯಕವಾದ ಬಜೆಟ್​, ಇದ್ರಲ್ಲಿ ಏನೂ ಇಲ್ಲ: ಕಾಂಗ್ರೆಸ್​

ಬೆಜಟ್​ನಲ್ಲಿ ಯಾವುದೇ ಕ್ಷೇತ್ರಕ್ಕೆ ಆದ್ಯತೆ ನೀಡಿಲ್ಲ. ಸಮಸ್ಯೆಗಳಿಗೆ ಪರಿಹಾರ ನೀಡಿಲ್ಲ. ಮೋದಿಯವರು 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್.. ಸಬ್ ಕಾ ವಿಶ್ವಾಸ್' ಅನ್ನುತ್ತಾರೆ. ನನ್ನ ದೃಷ್ಟಿಯಲ್ಲಿ ಇದೊಂದು 'ಸಬ್ ಕಾ ವಿನಾಶ್ ಬಜೆಟ್' ಎಂದು ಜರಿದರು. ಇದೇ ವೇಳೆ ನದಿಗಳ ಜೋಡಣೆ ಬಗ್ಗೆ ಪ್ರಸ್ತಾಪ ಕೇವಲ ಪ್ರಸ್ತಾಪವಾಗಿಯೇ ಉಳಿಯಲಿದೆ, ಅದು ಕಾರ್ಯ ರೂಪಕ್ಕೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.