ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಾಜ್ಯಾದಾದ್ಯಂತ ಮೂರು ದಿನಗಳ ಶೋಕಾಚರಣೆ ಪ್ರಯುಕ್ತ ಮೈಸೂರು ಅರಮನೆ ಆವರಣದಲ್ಲಿ ಸಂಜೆ 7 ರಿಂದ 8ರ ವರೆಗೆ ನಡೆಸಲ್ಪಡುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಜೂ.10ರಿಂದ 12ರ ವರೆಗೆ ಸ್ಥಗಿತಗೊಳಿಸಲಾಗಿದೆ.
ಜೂನ್ 13 ರಂದು ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.