ಮೈಸೂರು : ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ.
ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ; ಐವರು ವಿದ್ಯಾರ್ಥಿಗಳಿಗೆ ಗಾಯ