ಮೈಸೂರು: ತಿ.ನರಸೀಪುರದ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ವಚ್ಛತೆ ಹಾಗೂ ಅಡುಗೆ ತಯಾರಿಕಾ ವ್ಯವಸ್ಥೆಯನ್ನು ಖುದ್ದು ಪರಿಶೀಲನೆ ನಡೆಸಿದರು.
ಇಂದಿರಾ ಕ್ಯಾಂಟೀನ್ನಲ್ಲಿಯೇ ಚಿತ್ರಾನ್ನ ಸೇವಿಸಿದ ಸಚಿವ ಸೋಮಶೇಖರ್, ಗುಣಮಟ್ಟದ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದರು. ಪ್ರತಿದಿನ ಬೆಳಗ್ಗೆ 200 ಮಂದಿಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ತಲಾ 200 ಮಂದಿಗೆ ಆಗುವಷ್ಟು ಊಟವನ್ನು ಇಲ್ಲಿ ಸಿದ್ಧಪಡಿಸುವ ಬಗ್ಗೆ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂದಿರಾ ಕ್ಯಾಂಟೀನ್ನಲ್ಲಿ ಉತ್ತಮವಾದ ವ್ಯವಸ್ಥೆಯನ್ನು ಮಾಡಲಾಗಿದ್ದು, ಗುಣಮಟ್ಟವನ್ನು ಕಾಯ್ದುಕೊಳ್ಳಲಾಗಿದೆ. ಸ್ವತಃ ನಾನು ತಿಂಡಿಯನ್ನು ಸೇವಿಸುವ ಮೂಲಕ ಪರಿಶೀಲನೆ ನಡೆಸಿದ್ದು, ಶುಚಿಯಾಗಿ ಮತ್ತು ರುಚಿಯಾಗಿ ತಯಾರಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂ