ಮೈಸೂರು : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ರಾಷ್ಟ್ರಪತಿ ರಸ್ತೆಯಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಸ್ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.
ಮೊಲದ ಪ್ರಕರಣದಲ್ಲಿ ತ್ಯಾಗರಾಜ ಕಾಲೋನಿಯ ಶ್ರೀನಿವಾಸ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸ್ನೇಹಿತರ ಜೊತೆ ಸೇರಿ ಟ್ಯೂಷನ್ ನಾಮಫಲಕ ತೆಗೆಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ತೀವ್ರ ಅಸ್ವಸ್ಥರಾಗಿ ಕೆಳಗೆ ಬಿದ್ದಿದ್ದಾರೆ.
ತಕ್ಷಣ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು : ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಿಲೇನಿಯಮ್ ಸರ್ಕಲ್ನಲ್ಲಿ ನಡೆದಿದೆ.
ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್ ನಿಲ್ದಾಣದತ್ತ ಹೊರಟ ರಾಜಹಂಸ ಬಸ್ಗೆ ಸ್ಕೂಟರ್ ಸವಾರ ಡಿಕ್ಕಿ ಹೊಡೆದ ರಭಸಕ್ಕೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎನ್.ಆರ್. ಸಂಚಾರಿ ಪೊಲೀಸರು ಹಾಗೂ ಎನ್.ಆರ್. ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಮೃತರ ವಿವರ ಇನ್ನೂ ತಿಳಿದು ಬಂದಿಲ್ಲ.
ಇದನ್ನೂ ಓದಿ: ಪಾದಚಾರಿಗೆ ಗುದ್ದಿದ ಬಿಆರ್‌ಟಿಎಸ್ ಬಸ್.. ಗಾಯಾಳು ಸ್ಥಿತಿ ಗಂಭೀರ!