ಮೈಸೂರು: ಪ್ರತಿಭಟನೆ ವದಂತಿಯಿಂದಾಗಿ ನೂರಾರು ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಮೊಬೈಲ್‌ಗೆ ಮೆಸೇಜ್ ಬಂದಿದೆ. ಇದರಿಂದ ನೂರಾರು ಸಂಖ್ಯೆಯ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ್ದರು.
ಇದನ್ನೂ ಓದಿ: ಬಿಜೆಪಿಯ ದ್ವೇಷದ ಅಜೆಂಡಾ ಧಿಕ್ಕರಿಸಿ ನಾವೆಲ್ಲ ಸ್ನೇಹಿತರಾಗಿ ಒಟ್ಟಿಗೆ ಸಾಗೋಣ: ರಾಜ್ಯದ ವಿದ್ಯಾರ್ಥಿಗಳಿಗೆ ಸುರ್ಜೆವಾಲಾ ಪತ್ರ
ಇಲ್ಲಿ ಪ್ರತಿಭಟನೆ ಇದೆ ಎಂದು ವಿದ್ಯಾರ್ಥಿಗಳು ತಮ್ಮ ಮೊಬೈಲ್‌ಗೆ ಬಂದಿದ್ದ ಮೆಸೇಜ್ ತೋರಿಸಿದಾಗ, ಇದು ಫೇಕ್ ಮೆಸೇಜ್, ನಾವು ಯಾರಿಗೂ ಪ್ರತಿಭಟನೆ ಮಾಡಲು ಅವಕಾಶ ನೀಡಲ್ಲ ಎಂದು ಪೊಲೀಸರು ತಿಳಿ ಹೇಳಿ ಕಳುಹಿಸಿದರು. ಹಿಜಾಬ್ ಹಾಗೂ ಕೇಸರಿ ಶಾಲಿನ ವಿವಾದದಿಂದಾಗಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.