ETV Bharat / city

ಮೈಸೂರಿನ ಸುಧರ್ಮ ಸಂಸ್ಕೃತ ಪತ್ರಿಕೆಯ ಕೆ.ಎಸ್.ಜಯಲಕ್ಷ್ಮಿಗೆ 'ಪದ್ಮಶ್ರೀ' ಗೌರವ

ನಾಲ್ಕು ಪುಟಗಳ ಪತ್ರಿಕೆಯಲ್ಲಿ ದಿನದ ಮುಖ್ಯ ವಿದ್ಯಮಾನ, ಶೈಕ್ಷಣಿಕ ಕೋರ್ಸ್​ಗಳ ಮಾಹಿತಿ, ಕ್ರೀಡೆ ಇತ್ಯಾದಿ ಸಂಗತಿಗಳ ಕುರಿತ ಬರಹಗಳು ಪ್ರಕಟವಾಗುತ್ತವೆ. ಸುಧರ್ಮ ತನ್ನ ಅಂತರ್ಜಾಲ ಅವತರಣಿಕೆಯಲ್ಲಿ ಒಂದೂವರೆ ಲಕ್ಷ ಓದುಗರನ್ನು ಹೊಂದಿದೆ.

sudharma papers jayalaxmi
ಕೆ.ಎಸ್. ಜಯಲಕ್ಷ್ಮಿಗೆ 'ಪದ್ಮಶ್ರೀ' ಗೌರವ
author img

By

Published : Nov 8, 2021, 5:07 PM IST

ಮೈಸೂರು: ಮೈಸೂರಿನ ‘ಸುಧರ್ಮ’ಸಂಸ್ಕೃತ ಪತ್ರಿಕೆಯ ಕೆ.ಎಸ್.ಜಯಲಕ್ಷ್ಮಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ಮೂರು ದಶಕಗಳಿಂದ ದಿವಂಗತ ಸಂಪತ್ ಕುಮಾರ್ ಹಾಗೂ ಕೆ.ಎಸ್.ಜಯಲಕ್ಷ್ಮಿ ದಂಪತಿ ಸಂಸ್ಕೃತ ಪತ್ರಿಕೆ ' ಸುಧರ್ಮ'ವನ್ನು ನಡೆಸಿಕೊಂಡು ಬರುತ್ತಿದ್ದು, ಇವರ ಈ ಕಾರ್ಯವನ್ನು ಗುರುತಿಸಿದ ಕೇಂದ್ರ ಸರ್ಕಾರ 2020ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

1970ರಲ್ಲಿ ವರದರಾಜ ಅಯ್ಯಂಗಾರ್ ಅವರು ಸುಧರ್ಮ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಸಂಸ್ಕೃತ ಎಂದರೆ ಕೇವಲ ವಿದ್ವಾಂಸರಿಗೆ ಎಂಬ ಗ್ರಹಿಕೆಯನ್ನು ಬದಲಾಯಿಸುವುದಕ್ಕೆ, ದೈನಂದಿನ ವಿಚಾರಗಳು ಸಂಸ್ಕೃತದಲ್ಲಿ ವರದಿಯಾಗಿ, ಅವನ್ನು ಜನ ಓದುವಂತಾಗಲಿ ಎಂಬ ಉದಾತ್ತ ಧ್ಯೇಯದಿಂದ ಪ್ರಾರಂಭಿಸಿದ್ದ ಪತ್ರಿಕೆ ಇದಾಗಿದೆ. 1990ರಲ್ಲಿ ವರದರಾಜ ಅಯ್ಯಂಗಾರ್ ಅವರ ಮರಣಾನಂತರ ಸಂಪತ್ ಕುಮಾರ್ ದಂಪತಿ ಅದನ್ನು ಮುಂದುವರಿಸಿಕೊಂಡು ಬಂದಿದ್ದರು.

ನಾಲ್ಕು ಪುಟಗಳ ಪತ್ರಿಕೆಯಲ್ಲಿ ದಿನದ ಮುಖ್ಯ ವಿದ್ಯಮಾನ, ಶೈಕ್ಷಣಿಕ ಕೋರ್ಸ್​ಗಳ ಕುರಿತ ಮಾಹಿತಿ, ಕ್ರೀಡೆ ಇತ್ಯಾದಿ ಸಂಗತಿಗಳ ಕುರಿತ ಬರಹಗಳು ಪ್ರಕಟವಾಗುತ್ತವೆ. ಸುಧರ್ಮ ತನ್ನ ಅಂತರ್ಜಾಲ ಅವತರಣಿಕೆಯಲ್ಲಿ ಸುಮಾರು ಒಂದೂವರೆ ಲಕ್ಷ ಓದುಗರನ್ನು ಹೊಂದಿದೆ.

ಭಾರತದ ಹಲವು ಬಗೆಯ ಪರಂಪರೆ ಮತ್ತು ಜ್ಞಾನಗಳಿಗೆ ಕೀಲಿಕೈಯಂತಿರುವ ಸುಧರ್ಮ ಪತ್ರಿಕೆ ಸಂಸ್ಕೃತಿ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಪತ್ರಿಕೆಯನ್ನು ಈಗಲೂ ಮುಂದುವರೆಸಿಕೊಂಡು ಹೋಗುತ್ತಿರುವ ಕೆ.ಎಸ್. ಜಯಲಕ್ಷ್ಮಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ.

ಪ್ರಶಸ್ತಿ ಪುರಸ್ಕೃತ ಕೆ.ಎಸ್.ಜಯಲಕ್ಷ್ಮಿ ಅವರಿಗೆ ಶಾಸಕ ಎಸ್.ಎ.ರಾಮದಾಸ್ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಸುಧರ್ಮ ಪತ್ರಿಕೆಗೆ ರಾಜ್ಯ ಸರ್ಕಾರದಿಂದ ಜಾಹೀರಾತುಗಳನ್ನು ನೀಡಲು ಹಾಗೂ ಜಾಹೀರಾತಿನ ಮೊತ್ತವನ್ನು ಹೆಚ್ಚಿಸಲು ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.