ಮೈಸೂರು: ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಪೂರ್ವಾಶ್ರಮದ ಮಾತೃಶ್ರೀಯವರಾದ ಶ್ರೀಮತಿ ಶಿವನಾಗಮ್ಮ (90) ಲಿಂಗೈಕ್ಯರಾಗಿದ್ದಾರೆ. ಇವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಶಿವನಾಗಮ್ಮ ಅವರಿಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಐಎಎಸ್ ಅಧಿಕಾರಿಯಾದ ಷಡಕ್ಷರಿ ಸ್ವಾಮಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್, ಉದಯ್ ಶಂಕರ್ ಎಂಬ ನಾಲ್ಕು ಗಂಡು ಮಕ್ಕಳು ಹಾಗೂ ಶಶಿಕಲಾ ಮತ್ತು ಉಮದೇವಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಲಿಂಗೈಕ್ಯರಾದ ಶಿವನಾಗಮ್ಮನವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಸ್ಥಳೀಯ ಶಾಸಕರು ಸಂತಾಪ ಸೂಚಿಸಿದ್ದಾರೆ.
ಪ್ರತಾಪ್ ಸಿಂಹ ಸಂತಾಪ: ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಪೂವಾ೯ಶ್ರಮದ ಮಾತೃಶ್ರೀ ಶ್ರೀಮತಿ ಶಿವನಾಗಮ್ಮರವರು ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಮತಿ ಶಿವನಾಗಮ್ಮರವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: 'ಬಬ್ರುವಾಹನ','ಶರಪಂಜರ' ನಿರ್ಮಿಸಿದ ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ಇನ್ನಿಲ್ಲ