ಮೈಸೂರು: ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಿಸುವ ಎಚ್ಚರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೀಡಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನಲ್ಲಿ ಫೆಬ್ರವರಿ ತಿಂಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುವ ಸಲುವಾಗಿ ಗೃಹಿಣಿ ಕಲಾವತಿ ಎಂಬುವರನ್ನು ದರೋಡೆಕೋರರು ಹಾಡಹಗಲೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದರು. ಆ ಸಂದರ್ಭದಲ್ಲಿ ಕುಟುಂಬಸ್ಥರು, ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದರು.
ಆದರೆ, ಪೊಲೀಸರು ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಈ ಹಿನ್ನೆಲೆ ಸಭೆಯೊಂದರಲ್ಲಿ ಸಚಿವ ವಿ.ಸೋಮಣ್ಣ ಪ್ರಕರಣಕ್ಕೆ ಸಂಭಂದಿಸಿದ ಪೊಲೀಸ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಲಾಕ್ಡೌನ್ ಮುಗಿಯುತ್ತಿದ್ದಂತೆ ಕೊಲೆಗಾರನನ್ನು ಪತ್ತೆ ಹಚ್ಚಬೇಕು. ಇಲ್ಲವಾದರೆ ನಿಮ್ಮ ಮೇಲೆ ಪ್ರಕರಣ ದಾಖಲಿಸುತ್ತೇನೆ ಎಂದು ಎಚ್ಚರಿಸಿದರು.