ಮೈಸೂರು: 13 ಮಂದಿ ಪೊಲೀಸರು ಸೇರಿದಂತೆ ಒಂದೇ ದಿನ ಮೈಸೂರಿನಲ್ಲಿ 22 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 39ಕ್ಕೇರಿದೆ.
ಸ್ವಲ್ಪ ನಿರಾಳವಾಗಿದ್ದ ಮೈಸೂರಿಗೆ ಮತ್ತೆ ಆತಂಕ ಎದುರಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿ ವಾಪಸಾಗಿದ್ದ 13 ಮಂದಿ ಪೊಲೀಸರನ್ನ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಇವರೆಲ್ಲರಿಗೂ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಪೊಲೀಸರು ಸೇರಿದಂತೆ 22 ಮಂದಿಯನ್ನು ಕೋವಿಡ್-19 ಆಸ್ಪತ್ರಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನಲ್ಲಿ ಒಟ್ಟಾರೆ ಈವರೆಗೆ 151 ಕೊರೊನಾ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ 112 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.