ಮೈಸೂರು:
ಜಿಲ್ಲೆಯಲ್ಲಿಂದು 161 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 307 ಮಂದಿ ಡಿಸ್ಚಾರ್ಜ್ ಹಾಗೂ ಇಬ್ಬರು ಸಾವನ್ನಪ್ಪಿದಾರೆ.
ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47,684 ಕ್ಕೆ ಏರಿಕೆಯಾಗಿದೆ. ಒಟ್ಟು 45,093 ಮಂದಿ ಗುಣಮುಖರಾಗಿದ್ದು, ಇನ್ನು ಜಿಲ್ಲೆಯಲ್ಲಿ 1,633 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದು, ಆ ಮೂಲಕ ಸಾವನ್ನಪ್ಪಿದವರ ಸಂಖ್ಯೆ ಒಟ್ಟು 958 ಆಗಿದೆ.
ಚಿಕ್ಕಬಳ್ಳಾಪುರ:
ಜಿಲ್ಲೆಯಲ್ಲಿ ಇಂದು 80 ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, 214 ಸೊಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಒಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ 39, ಬಾಗೇಪಲ್ಲಿ 11, ಚಿಂತಾಮಣಿ 8, ಗೌರಿಬಿದನೂರು 11, ಗುಡಿಬಂಡೆ 1, ಶಿಡ್ಲಘಟ್ಟ 10 ಸೋಂಕಿತರು ಧೃಡಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,420ಕ್ಕೆ ಏರಿಕೆಯಾಗಿದೆ.
ಇನ್ನೂ ಚಿಕ್ಕಬಳ್ಳಾಪುರ 121, ಬಾಗೇಪಲ್ಲಿ 10, ಚಿಂತಾಮಣಿ 9, ಗೌರಿಬಿದನೂರು 31, ಗುಡಿಬಂಡೆ 20, ಶಿಡ್ಲಘಟ್ಟ 23 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಗುಣಮುಖಗೊಂಡವರ ಸಂಖ್ಯೆ 11,003 ಕ್ಕೆ ಏರಿಕೆಯಾಗಿದೆ.
ಇನ್ನೂ ಚಿಕ್ಕಬಳ್ಳಾಪುರ ಮೂಲದ 74 ವರ್ಷದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 110 ಕ್ಕೆ ಏರಿಕೆಯಾಗಿದೆ.