ಮೈಸೂರು: ಸತತ ಮಳೆಯಿಂದಾಗಿ ಜಲಾಶಯಗಳು ತುಂಬಿಕೊಂಡಿದ್ದು, ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ನದಿ ನೀರಿನಿಂದಾಗಿ ತಲಕಾಡಿನ ಸುತ್ತಮುತ್ತ ಪ್ರವಾಹ ಉಂಟಾಗಿದೆ. ಹೀಗಾಗಿ ತಲಕಾಡಿನ ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರು ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ.
ಕೆಆರ್ಎಸ್ ಹಾಗೂ ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ತಲಕಾಡಿನ ಸುತ್ತಮುತ್ತ ಪ್ರವಾಹ ಉಂಟಾಗಿದೆ. ಆ ಪ್ರದೇಶದಲ್ಲಿನ ಅಂಗಡಿ ಮುಂಗಟ್ಟು, ವ್ಯಾಪಾರಸ್ಥರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರ ಆಗಮನವನ್ನು ನಿಷೇಧಿಸಲಾಗಿದೆ.
ನದಿ ಬಳಿ ಪ್ರವಾಸಿಗರು, ಗ್ರಾಮಸ್ಥರು ಹೋಗದಂತೆ ಸೂಚನೆ ನೀಡಲಾಗುತ್ತಿದೆ. ಸದ್ಯ ಕಾವೇರಿ ನಿಸರ್ಗಧಾಮದ ಗೇಟ್ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಕಾವೇರಿ ನಿಸರ್ಗಧಾಮದಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ.
ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ.. ಹಳ್ಳದಲ್ಲಿ ಕಾರು ಪಲ್ಟಿಯಾಗಿ ನಾಪತ್ತೆಯಾಗಿದ್ದ ಇಬ್ಬರ ಮೃತದೇಹ ಪತ್ತೆ