ETV Bharat / city

ಮೈಸೂರು: ಲಕ್ಷ್ಮಣ ತೀರ್ಥ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರು ಪಾಲು

author img

By

Published : Jun 18, 2022, 10:59 AM IST

ಲಕ್ಷ್ಮಣ ತೀರ್ಥ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

Two drown while swimming in river
ಮೃತ ಯುವಕರು

ಮೈಸೂರು: ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರಣ ಘಟನೆ ಹುಣಸೂರು ತಾಲೂಕಿನ ಹೆಗ್ಗಂದೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್ ರಾವ್ ಎಂಬುವವರ ಅವರ ಮಗ ಶರತ್ ರಾವ್(17) ಮತ್ತು ಪುಟ್ಟೇಗೌಡ ಎಂಬುವವರ ಮಗ ಶಶಿಕುಮಾರ್(17) ಮೃತ ದುರ್ದೈವಿಗಳು. ಮೃತರಿಬ್ಬರು ಹನಗೋಡು ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಇಂದು ಪ್ರಕಟವಾಗಬೇಕಿದ್ದ ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಮಗೌಡನಹಳ್ಳಿ ಬಳಿ ಲಕ್ಷ್ಮಣ ತೀರ್ಥ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ಈಜುತ್ತಿದ್ದ ವೇಳೆ ನೀರಿನ ಸೆಳೆತ ಹೆಚ್ಚಾಗಿ ಹೊರಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹುಣಸೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಶಶಿಕುಮಾರ್ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಕತ್ತಲಾಗಿದ್ದರಿಂದ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಿದ್ದು, ಇಂದು ಮತ್ತೆ ಕಾರ್ಯಾಚರಣೆ ನಡೆಸಿ ಶರತ್ ರಾವ್ ಮೃತದೇಹವನ್ನು ಹೊರ ತೆಗೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಬೂಲ್ ಗುರುದ್ವಾರದ ಮೇಲೆ ಉಗ್ರರ ದಾಳಿ: ಒಬ್ಬನ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.