ETV Bharat / city

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ: ಬಸವರಾಜ ಬೊಮ್ಮಾಯಿ - Very Soon Lokayukta will be appointed

ಲೋಕಾಯುಕ್ತರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ, ಶೀಘ್ರವೇ ಲೋಕಾಯುಕ್ತರ ನೇಮಕವಾಗುತ್ತದೆ. ಇನ್ನು ವಿಳಂಬವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
author img

By

Published : Jun 8, 2022, 1:07 PM IST

ಮೈಸೂರು: ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ, ನಮಗೆ ಮೂರು ಸ್ಥಾನ ಗೆಲ್ಲುವಷ್ಟು ಮತಗಳಿವೆ. ಬೇರೆ ಯಾವುದೇ ಪಕ್ಷದ ಮತಗಳ ಅವಶ್ಯಕತೆ ಇಲ್ಲ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆ ತಡೆ ಹಿಡಿಯುವಂತೆ ಸುಪ್ರೀಂಕೋರ್ಟ್​ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿರುವ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿರುವುದು ನ್ಯಾಯಸಮ್ಮತವಲ್ಲ. ಕೋರ್ಟ್ ನೋಟಿಸ್​ಗೆ ನಾವು ಸಮರ್ಥವಾದ ಉತ್ತರ ಕೊಟ್ಟಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಸುಪ್ರೀಂಕೋರ್ಟ್ ಆದೇಶದನ್ವಯ ರಚನೆಯಾಗಿದೆ. ಕಾವೇರಿ ನದಿಗೆ ಸಂಬಂಧಪಟ್ಟಂತೆ ಯಾವ ಯೋಜನೆ ಜಾರಿಗೊಳಿಸಬೇಕು ಎಂಬ ತೀರ್ಮಾನ ಮಾಡುವ ಅಧಿಕಾರ ಪ್ರಾಧಿಕಾರಕ್ಕೆ ಮಾತ್ರ ಇದೆ. ಮೇಕೆದಾಟು ಯೋಜನೆ ಸಂಬಂಧ ಈಗಾಗಲೇ 16 ರಿಂದ 17 ಸಭೆಗಳು ಆಗಿವೆ ಎಂದರು.

ಇದನ್ನೂ ಓದಿ: ಯುದ್ಧದಲ್ಲಿ ಮೃತಪಟ್ಟವರ ಶವಗಳನ್ನ ಉಕ್ರೇನ್​​ಗೆ ಮರಳಿಸಿದ ರಷ್ಯಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.