ಮೈಸೂರು: ಗೃಹ ಸಚಿವ ಆರಗ ಜ್ಞಾನೇಂದ್ರ ತಾಲಿಬಾನ್ ಪ್ರತೀಕ. ಅವರು ಯುವತಿಯ ಬಗ್ಗೆ ಹಗುರವಾಗಿ ಮಾತನಾಡಿ ತಾಲಿಬಾನ್ ಪ್ರವೃತ್ತಿಯನ್ನು ತೋರಿಸಿದ್ದಾರೆ ಎಂದು ಕಾಂಗ್ರೆಸ್‌ನ ಸತ್ಯಶೋಧನ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಟೀಕಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರು ಹತಾಶೆಯಿಂದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾಗಿದ್ದಾರೆ. ಆ ಕಾರಣದಿಂದ ಅವರ ಹುದ್ದೆಗೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
ಬೆಂಗಳೂರಿನಿಂದ ಅತ್ಯಾಚಾರ ಪ್ರಕರಣ ತನಿಖೆ ವೀಕ್ಷಿಸುವುದಾಗಿ ಬಂದಿದ್ದ ಗೃಹ ಸಚಿವ, ಫೈರಿಂಗ್ ಉದ್ಘಾಟನೆ, ಬಿಜೆಪಿ ಕಾರ್ಯಕರ್ತರ ಸಭೆ, ಸಸಿ ನೆಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣವನ್ನು ಗೃಹ ಸಚಿವರು ತಾತ್ಸಾರ ಮಾಡುತ್ತಿದ್ದಾರೆ. ಇದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಹರಿಹಾಯ್ದರು.
ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವ ಯತ್ನ
ಅತ್ಯಾಚಾರ ಪ್ರಕರಣದ ಸಮಯ, ದಿನಾಂಕ ತಿದ್ದುವ ಕೆಲಸ ಮಾಡಲಾಗಿದೆ. ಅತ್ಯಾಚಾರಿಗಳನ್ನು ಬಂಧಿಸದೇ ಇರುವುದು, ಘಟನೆಗೆ ಸಾಕ್ಷಿಯಾದವರನ್ನು ಆಸ್ಪತ್ರೆಯಿಂದಲೇ ಕಳುಹಿಸುವ ಮೂಲಕ ಘಟನೆಯನ್ನು ಮುಚ್ಚಿಹಾಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಉಗ್ರಪ್ಪ ಗಂಭೀರ ಆರೋಪ ಮಾಡಿದರು.
ಇದನ್ನೂ ಓದಿ: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ: ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರವೇಶ ಪತ್ರ ಲಭ್ಯ