ಮೈಸೂರು: ಸಾಮೂಹಿಕ ಅತ್ಯಾಚಾರ ಭಿಕ್ಷುಕಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಒಟ್ಟು ಐವರನ್ನು ಬಂಧಿಸಿದಂತಾಗಿದೆ.
ರಫೀಕ್ ಅಹಮ್ಮದ್, ಮಂಜುನಾಥ್, ಮನು, ರೇವಣ್ಣ ಅಲಿಯಾಸ ರೇವ, ಕೃಷ್ಣ ಬಂಧಿತ ಆರೋಪಿಗಳು.
ಫೆ.15ರ ರಾತ್ರಿ ಬಿ.ಎನ್.ಸ್ಟ್ರೀಟ್ನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದರು. ಗಸ್ತಿನಲ್ಲಿದ್ದ ಪೊಲೀಸರು ಬಂದಾಗ ಆರೋಪಿಗಳು ಓಡಿಹೋಗಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಓಡಿಹೋದ ಸ್ಥಳ ಪರಿಶೀಲನೆ ಮಾಡಿದಾಗ, ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಗೊತ್ತಾಗಿತ್ತು.
ಕೂಡಲೇ ಕಾರ್ಯಪ್ರವೃತ್ತರಾದ ಲಷ್ಕರ್ ಠಾಣಾ ಪೊಲೀಸರು, ಮೇಲಾಧಿಕಾರಿಗಳ ಗಮನಕ್ಕೆ ತಂದು, ಶ್ವಾನದಳದ ಸಹಾಯದಿಂದ ಬುಧವಾರ ಬೆಳಿಗ್ಗೆ ನಾಲ್ವರನ್ನು ಬಂಧಿಸಿದ್ದಾರೆ. ನಂತರ ಬುಧವಾರ ಸಂಜೆ ಮತ್ತೊಬ್ಬನನ್ನು ಬಂಧಿಸಿದ್ದಾರೆ. (ಇದನ್ನೂ ಓದಿ: ಸಾಂಸ್ಕೃತಿಕ ನಗರಿಯಲ್ಲಿ ಹೀನ ಕೃತ್ಯ: ಭಿಕ್ಷುಕಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್, ಕೊಲೆ!)
ಆರೋಪಿ ರಫೀಕ್ ಮನೆಯಲ್ಲಿ ವಾಸ ಮಾಡುತ್ತಿದ್ದರೆ,ಇನ್ನುಳಿದ ನಾಲ್ವರು ಕೂಲಿ ಕೆಲಸ, ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದಾರೆ. ಈ ನಾಲ್ವರಿಗೆ ಯಾವುದೇ ಮನೆ ಇಲ್ಲ, ಅಕ್ಕಿಚೌಕ ಮತ್ತು ಮಂಡಿ ಕಡೆಯ ಅಂಗಡಿ ಮುಂದೆ ಮಲಗುತ್ತಿದ್ದರು.
ತನಿಖೆಯಲ್ಲಿ ಪಾಲ್ಗೊಂಡು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಆಯುಕ್ತರಾದ ಡಾ.ಚಂದ್ರಗುಪ್ತ ಅವರು 10 ಸಾವಿರ ಬಹುಮಾನ ಘೋಷಿಸಿದ್ದಾರೆ. (ಇದನ್ನೂ ಓದಿ:ಭಿಕ್ಷುಕಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ನಾಲ್ವರು ಕಾಮುಕರು ಅರೆಸ್ಟ್, ಮತ್ತೊಬ್ಬ ಎಸ್ಕೇಪ್)