ETV Bharat / city

ಶಿವಮೊಗ್ಗ: ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ 13 ವಿದ್ಯಾರ್ಥಿನಿಯರು - ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕಾರ

ಶಿವಮೊಗ್ಗದಲ್ಲಿ 13 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಶಾಲಾ ಸಿಬ್ಬಂದಿ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

shivamogga
ನಿಲ್ಲದ ಸಂಘರ್ಷ
author img

By

Published : Feb 14, 2022, 12:09 PM IST

Updated : Feb 14, 2022, 12:40 PM IST

ಶಿವಮೊಗ್ಗ: ನಗರದಲ್ಲಿ ಹಿಜಾಬ್​​​​​​​ ಸಂಘರ್ಷ ಮುಂದುವರೆದಿದ್ದು, ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​​ನಲ್ಲಿ ಇಂದು ಎಸ್​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 13 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಬಂದಿದ್ದರು. ಈ ವೇಳೆ ಸಿಬ್ಬಂದಿ ಹಿಜಾಬ್​ ತೆಗೆದು ಪರೀಕ್ಷೆಗೆ ಹಾಜರಾಗಲು ಸೂಚಿಸಿದ್ದಾರೆ. ಆದರೆ, ಇದಕ್ಕೆ ವಿದ್ಯಾರ್ಥಿಗಳು ಒಪ್ಪಿಗೆ ಸೂಚಿಸಿಲ್ಲ.

ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ 13 ವಿದ್ಯಾರ್ಥಿನಿಯರು

ಕೋರ್ಟ್​ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರೂ ಕೇಳದ 13 ವಿದ್ಯಾರ್ಥಿನಿಯರು, ಹಿಜಾಬ್​ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಶಾಲಾ ಸಿಬ್ಬಂದಿ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಕ್ಲಾಸ್​ಗೆ ಎಂಟ್ರಿ: ಎಚ್ಚೆತ್ತು ಹಿಜಾಬ್ ತೆಗೆಸಿದ ಶಿಕ್ಷಕರು

Last Updated : Feb 14, 2022, 12:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.