ETV Bharat / city

ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 31 ಮಂದಿಗೆ ಗಾಯ - ಶಿವಮೊಗ್ಗ ಬಸ್ ಅಪಘಾತ

ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಕಾರಣ ಎಲ್ಲರೂ ಪ್ರಥಮ ಚಿಕಿತ್ಸೆ ಪಡೆದು ತಮ್ಮೂರಿಗೆ ವಾಪಸ್ ಆಗಿದ್ದಾರೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

bus overturned in Shivamogga
ಖಾಸಗಿ ಬಸ್ ಪಲ್ಟಿ
author img

By

Published : Apr 23, 2022, 10:22 AM IST

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ.

bus overturned in Shivamogga
ಖಾಸಗಿ ಬಸ್ ಪಲ್ಟಿ

ಇದನ್ನೂ ಓದಿ: ರಾಯಚೂರು : ಪ್ರೀತಿಸಿದ್ರೂ ಮದುವೆ ಆಗಲಾಗಲಿಲ್ಲ ಎಂದು ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!

ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು.

ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಕಾರಣ ಎಲ್ಲರೂ ಪ್ರಥಮ ಚಿಕಿತ್ಸೆ ಪಡೆದು ತಮ್ಮೂರಿಗೆ ವಾಪಸ್ ಆಗಿದ್ದಾರೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.