ಶಿವಮೊಗ್ಗ: ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 35 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಉಂಬ್ಳೆಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟದ ಕೆರೆ ಬಳಿ ನಡೆದಿದೆ.
ಶಿವಮೊಗ್ಗದಿಂದ ಎನ್.ಆರ್.ಪುರ ಕಡೆಗೆ ಹೋಗುವ ಕೆ.ಕೆ.ಬಿ ಎಂಬ ಖಾಸಗಿ ಬಸ್ ಹಾಗೂ ಎನ್.ಆರ್.ಪುರ ದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಬಸ್ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 35 ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
(ಇದನ್ನೂ ಓದಿ: ವಿಡಿಯೋ: ಆರೋಪಿ ಬಂಧಿಸಲು ಬಂದ ಪೊಲೀಸರ ಮೇಲೆ ಮಹಿಳೆಯರಿಂದ ದೊಣ್ಣೆಗಳಿಂದ ಹಲ್ಲೆ!)