ಶಿವಮೊಗ್ಗ: ಲಾಕ್ಡೌನ್ ನಿಯಮ ಉಲ್ಲಂಘಿಸಿದ 364 ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ, 1,62,700 ರೂ. ದಂಡವ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 376 ದ್ವಿಚಕ್ರ ವಾಹನಗಳು, 13 ಕಾರುಗಳು ಹಾಗು 20 ಆಟೋಗಳು ಸೇರಿ 409 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲಾಕ್ಡೌನ್ ನಿಯಮ ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿ ಭದ್ರಾವತಿ ಓಲ್ಡ್ಟೌನ್ ಪೊಲೀಸ್ ಠಾಣೆಯಲ್ಲಿ 02 ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: ಬಸ್ ಮುಷ್ಕರ: ಹೈಕೋರ್ಟ್ ಸಲಹೆಯಂತೆ ನೌಕರರ ಅಮಾನತು ಕೈಬಿಟ್ಟ ಸಾರಿಗೆ ನಿಗಮ