ETV Bharat / city

ಗೋವು ಕಳ್ಳತನ ಪ್ರಕರಣ.. ಸಾಗರದಲ್ಲಿ ಐವರು ಆರೋಪಿಗಳ ಬಂಧನ - shivamogga latest news

ಸಾಗರ ತಾಲೂಕಿನ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

shivamogga cow theft case
ಶಿವಮೊಗ್ಗ ಗೋವು ಕಳ್ಳತನ ಪ್ರಕರಣ
author img

By

Published : Oct 31, 2021, 1:48 PM IST

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಡೆದ ಗೋವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಸಾಗರ ತಾಲೂಕಿನ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಾಗರ ಪೇಟೆ ಠಾಣೆ ಪೊಲೀಸರು ಹಾಗೂ ಸಾಗರ ಗ್ರಾಮಾಂತರ ಠಾಣೆ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಬಂಧಿಸಲಾಗಿದೆ.

ಆರೋಪಿಗಳನ್ನು ಶಿವಮೊಗ್ಗದ ಟಿಪ್ಪು ನಗರದ ಅಮಾನುಲ್ಲಾ @ ಅಮ್ಮನ್ , ದಸ್ತಗೀರ್, ತುಂಗಾ ನಗರದ ಸಿಕಂದರ್, ಹಾರನ ಹಳ್ಳಿಯ ರೋಹಿತ್ ಹಾಗೂ ಮಂಗಳೂರಿನ ಬಜ್ಪೆಯ ಫೈಜಲ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಒಂದು ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಸಾಗರ ನಗರದ ವಿವಿಧ ಕಡೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ನಡೆದ ಗೋವು ಕಳ್ಳತನ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಕ್ರೆಡಿಟ್ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಮಂಗಳೂರಿನ ವ್ಯಕ್ತಿಗೆ 6.94 ಲಕ್ಷ ರೂ. ವಂಚನೆ

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಮ್ ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ ಹಾಗೂ ಸಾಗರ ಡಿವೈಎಸ್ಪಿ ವಿನಾಯಕ್ ಶೇಟಗೆರಿರವರ ಸಲಹೆಯಂತೆ ಸಾಗರ ಪೇಟೆ ಠಾಣೆ ವೃತ್ತ ನಿರೀಕ್ಷಕರು ಅಶೋಕ್ ಕುಮಾರ್ ಮತ್ತು ಸಾಗರ ಗ್ರಾಮಾಂತರ ಠಾಣೆಯ ಪಿ.ಐ ಗಿರೀಶ್ ಅವರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದರು. ಪೇಟೆ ಠಾಣೆ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ತಂಡ ರಚಿಸಿಕೊಂಡು ಕಾರ್ಯಾಚರಣೆ ನಡೆಸಿ ಗೋವು ಕಳ್ಳತನದಲ್ಲಿ ಭಾಗಿಯಾಗಿದ್ದ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.