ಬೆಂಗಳೂರು: ರಾಜ್ಯದಲ್ಲಿ ಹೊಸತಾಗಿ 53 ಹೊಸ ಪಾಸಿಟಿವ್ ಕೇಸ್ ವರದಿಯಾಗಿದ್ದು, ರಾಜ್ಯದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 847ಕ್ಕೇರಿಕೆಯಾಗಿದೆ.
ಇಂದು ಒಂದೇ ದಿನ 53 ಕೇಸ್ ದಾಖಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿ ಸೋಂಕು ಪತ್ತೆಯಾಗಿದೆ. ಶಿವಮೊಗ್ಗದಲ್ಲಿ 8 ಜನರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬೆಳಗಾವಿ 22, ಬಾಗಲಕೋಟೆಯಲ್ಲಿ 8, ಉತ್ತರ ಕನ್ನಡ 7, ಬೆಂಗಳೂರು 3, ಕಲಬುರಗಿ 3, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ರಾಜ್ಯದಲ್ಲಿ ಈವರೆಗೆ 405 ಮಂದಿ ಗುಣಮುಖರಾಗಿದ್ದು, ಒಟ್ಟು 31 ಜನ ಸಾವನ್ನಪ್ಪಿದ್ದಾರೆ. ನಿನ್ನೆಯಿಂದ ರಾಜ್ಯದಲ್ಲಿ 19 ಮಂದಿ ಗುಣಮುಖರಾಗಿದ್ದಾರೆ.