ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್ ರಾಜಕುಮಾರ್ ಅವರ ಬೃಹತ್ ಫ್ಲೆಕ್ಸ್ ಹಾಕಲಾಗಿತ್ತು.
ಈ ವೇಳೆ ಆನಂದ್ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್ರ ಫ್ಲೆಕ್ಸ್ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ. ಇದನ್ನು ಕಂಡ ಆಯೋಜಕರು ಆತನಿಗೆ ಧರ್ಮದೇಟು ನೀಡಿದ್ದಾರೆ. ಪುನೀತ್ ಅವರ ಫ್ಲೆಕ್ಸ್ ರೂಪಿಸಲು 15 ಸಾವಿರ ರೂಪಾಯಿ ಖರ್ಚು ಮಾಡಲಾಗಿತ್ತು.
ಇದನ್ನು ಕಿತ್ತುಹಾಕಿದ ಕಿಡಿಗೇಡಿ ಆನಂದ್ನನ್ನು ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಆನಂದ್ನನ್ನು ಪೊಲೀಸರು ಬುದ್ಧಿ ಹೇಳಿ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.