ಶಿವಮೊಗ್ಗ: ನಿನ್ನೆ ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ. ಸಾಗರದ ಗಣಪತಿ ಕೆರೆಯಲ್ಲಿ ಬೆಳಲಮಕ್ಕಿಯ ರಕ್ಷಿತ(16) ಎಂಬ ಬಾಲಕಿಯ ಮೃತದೇಹ ದೊರೆತಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಫ್ಯಾಟ್ ಸರ್ಜರಿ ವೇಳೆ ನಟಿ ಸಾವು
ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸಾಗರ ಟೌನ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಷಕರ ದುಃಖ ಮುಗಿಲು ಮುಟ್ಟಿದೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.