ETV Bharat / city

ಕೋವಿಡ್ 3ನೇ ಅಲೆ ನಿಯಂತ್ರಣ ಮಾರ್ಗಸೂಚಿಯಲ್ಲಿ ತಿದ್ದುಪಡಿ: ಆದೇಶ ಹೊರಡಿಸಿದ DC

author img

By

Published : Aug 12, 2021, 7:51 PM IST

ಎಲ್ಲ ಲಾಡ್ಜ್, ಹೋಟೆಲ್, ಹೋಂ ಸ್ಟೇ, ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್​ಟಿಪಿಸಿಆರ್ ನೆಗೆಟಿವ್ ವರದಿ ಹಾಗೂ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.

DC
DC

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಲಾಗಿದೆ. ತಿದ್ದುಪಡಿ ಮಾಡಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೂತನ ಮಾರ್ಗಸೂಚಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಎಲ್ಲ ಲಾಡ್ಜ್, ಹೋಟೆಲ್, ಹೋಂ ಸ್ಟೇ, ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕ್ಕಿಂಗ್​ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್​ಟಿಪಿಸಿಆರ್ ನೆಗೆಟಿವ್ ವರದಿ ಹಾಗೂ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದದ್ದನ್ನು ಕಡ್ಡಾಯಗೊಳಿಸಲಾಗಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಈ ಆದೇಶ ಅನ್ವಯಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.