ಶಿವಮೊಗ್ಗ: ಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ತಮ್ಮ ಕಾರ್ಯಕರ್ತರೊಂದಿಗೆ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಗೋ ಹತ್ಯೆ ನಿಷೇಧ ವಿಧೇಯಕವನ್ನು ಸ್ವಾಗತಿಸಿದ್ದಾರೆ.
ಈ ವಿಧೇಯಕ ಜಾರಿಗೊಳಿಸುವ ಬಗ್ಗೆ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಕಳೆದ ಬಾರಿ ವಿಧಾನಸಭೆಯಲ್ಲಿ ಅಂಗೀಕರವಾಗಿದ್ರೂ ರಾಜ್ಯಪಾಲರು ಒಪ್ಪಿಗೆ ನೀಡದ ಕಾರಣ ಮಸೂದೆ ಪಾಸ್ ಆಗಿರಲಿಲ್ಲ. ಈಗ ಬಿಜೆಪಿ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಇದು ಬಿಜೆಪಿ ನುಡಿದಂತೆ ನಡೆಯುವ ಪಕ್ಷವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಓದಿ: ಅಪ್ರಾಪ್ತನಿಂದ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಸಾಗರದಲ್ಲಿ ಪೊಕ್ಸೊ ಪ್ರಕರಣ ದಾಖಲು