ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘ, ಎಸ್ಡಿಪಿಐ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಿಂದ ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿ ತಡೆದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಯಾವುದೇ ಕಾರಣಕ್ಕೂ ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿದರು.