ETV Bharat / city

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ - ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ರಸ್ತೆ ಅಪಘಾತದಲ್ಲಿ (Road accident) ಗಾಯಗೊಂಡವರನ್ನು ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ಮಾನವೀಯತೆ ಮೆರೆದಿದ್ದಾರೆ.

Araga Jnanendra helps to accident victims
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ
author img

By

Published : Nov 13, 2021, 4:00 PM IST

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಬೈಕ್​​​ನಿಂದ ಬಿದ್ದು ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ಮಾನವೀಯತೆ ಮೆರೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಇಂದು ಗೃಹ ಸಚಿವರು (Home Minister) ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಬಳಿ ಬೈಕ್ ಸವಾರರಿಬ್ಬರು ಗಾಯಗೊಂಡು ರಸ್ತೆ ಬದಿ ಬಿದ್ದಿದ್ದರು.

ತಕ್ಷಣ ತಮ್ಮ ವಾಹನ ನಿಲ್ಲಿಸಿದ ಸಚಿವರು, ಗಾಯಾಳುಗಳಿಗೆ ನೀರು ಕುಡಿಸಿ ಅವರನ್ನು ತಮ್ಮದೇ ಎಸ್ಕಾರ್ಟ್ ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ (Shivamogga Meggan Hospital) ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದರು. ಅವರಿಗೆ ಉಪಚರಿಸಿ, ಆಸ್ಪತ್ರೆಗೆ ಕಳುಹಿಸಿ ಕೊಟ್ಟೆ. ಅವರ ವಿಳಾಸ ಇನ್ನೂ ತಿಳಿದು ಬಂದಿಲ್ಲ. ಇದರಲ್ಲಿ ಓರ್ವ ಆರಗದವನು ಎಂದು ಹೇಳುತ್ತಿದ್ದ. ಆದರೆ ಮುಖ ಗಾಯವಾಗಿದ್ದ ಕಾರಣ ಯಾರೆಂದು ತಿಳಿಯಲಿಲ್ಲ ಎಂದರು.

ಇದನ್ನೂ ಓದಿ: ಕರ್ನಾಟಕ ಬಿಟ್​ಕಾಯಿನ್ ಹಗರಣದ ಬಗ್ಗೆ ಪಕ್ಷಪಾತರಹಿತ ತನಿಖೆ ನಡೆಯಬೇಕು : ಸುರ್ಜೇವಾಲಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.