ETV Bharat / city

ಸಾಗರ: ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಮೇಲೆ ಮತ್ತೆ ಹಲ್ಲೆ! - ಸಾಗರ ಟೌನ್ ಪೊಲೀಸ್ ಠಾಣೆ

ರಾಷ್ಟ್ರೀಯ ಉದ್ಯೋಗ ಖಾತ್ರಿ ವಿಚಾರದಲ್ಲಿ ಹಲ್ಲೆಗೆ ಒಳಗಾದ ವ್ಯಕ್ತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ ಮತ್ತೆ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಡೆದಿದೆ.

Attack on hospitalized man in sagara governament hospital
ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಮೇಲೆ ಮತ್ತೆ ಹಲ್ಲೆ..!
author img

By

Published : May 27, 2020, 10:05 AM IST

ಶಿವಮೊಗ್ಗ: ಹಲ್ಲೆಗೆ ಒಳಗಾದ ವ್ಯಕ್ತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ ಮತ್ತೆ ಹಲ್ಲೆ ನಡೆಸಿರುವ ಘಟನೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಡೆದಿದೆ.

ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಮೇಲೆ ಮತ್ತೆ ಹಲ್ಲೆ!

ಚೌಡಪ್ಪ ಹಲ್ಲೆಗೊಳಗಾದ ವ್ಯಕ್ತಿ. ಸಾಗರ ತಾಲೂಕಿನ ಕುಗ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ವಿಚಾರದಲ್ಲಿ ಚೌಡಪ್ಪ, ಮನೋಜ್ ಕುಗ್ವೆ ಹಾಗೂ ನಾಗರಾಜ್ ಎಂಬುವರ ನಡುವೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಹಲ್ಲೆಗೊಳಗಾದ ಚೌಡಪ್ಪ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವೇಳೆ ಮತ್ತೆ ಆಸ್ಪತ್ರೆಗೆ ಬಂದ ಮನೋಜ್ ಕುಗ್ವೆ ಹಾಗೂ ನಾಗರಾಜ್, ಚೌಡಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅಸ್ಪತ್ರೆಯ ಗಾಜು ಹಾಗೂ ಪೀಠೋಪಕರಣಗಳು ಹಾನಿಯಾಗಿದ್ದು, ಆಸ್ಪತ್ರೆಯ ಕಾರಿಡಾರ್​ನಲ್ಲಿ ರಕ್ತ ಚೆಲ್ಲಾಡಿದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿ ಪ್ರಕಾಶ್ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.